PU Result 2024 | ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 97.78 ಫಲಿತಾಂಶ

0 528

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ಶೇ. 97.78 ಫಲಿತಾಂಶ ಬಂದಿದೆ.

ಕಲಾ ವಿಭಾಗ 98.57% ವಿಜ್ಞಾನ ವಿಭಾಗದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯ ಪರೀಕ್ಷೆಯಲ್ಲಿ 226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು, 221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ‌.

ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
ಭೂಮಿಕಾ : 559 ವಿಜ್ಞಾನ ವಿಭಾಗ
ಇಂಚರ : 577 ವಾಣಿಜ್ಯ ವಿಭಾಗ
ತುಳಸಿ : 578 ಕಲಾ ವಿಭಾಗ
ಇವರಿಗೂ ಮತ್ತು ಅತ್ಯುತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ, ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!