Ripponpet | ಹೃದಯಾಘಾತ ; ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ ವಿನಾಯಕ ಶೆಟ್ಟಿ ಇನ್ನಿಲ್ಲ !

0 10,742

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ.


ಕನ್ನಡಪರ ಸಂಘಟನೆಗಳಲ್ಲಿ ಹಾಗೂ ಸಮಾಜ ಸೇವೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ಶೆಟ್ಟಿಗೆ ಇಂದು ಬೆಳಗಿನಜಾವ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.


ಮೃತ ವಿನಾಯಕ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಮತ್ತು ಸ್ನೇಹಿತರನ್ನು ಅಗಲಿದ್ದಾರೆ.


ಸಂತಾಪ:
ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಕನ್ನಡಪರ ಸಂಘಟನೆಗಳ ಹೋರಾಟಗಾರ ಹಾಗೂ ಸಮಾಜ ಸೇವಕ ವಿನಾಯಕ ಶೆಟ್ಟಿ ನಿಧನಕ್ಕೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯ ಬಂಡಿ ರಾಮಚಂದ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ, ಆಶ್ರಿತಾ ಸಂತೋಷ್, ಕನ್ನಡ ಕಸ್ತೂರಿ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಉಲ್ಲಾಸ್, ನಿಕಟ ಪೂರ್ವ ಅಧ್ಯಕ್ಷ ಮೆಣಸೆ ಆನಂದ, ಪ್ರಧಾನ ಕಾರ್ಯದರ್ಶಿಗಳಾದ ಆಸಿಫ್ ಭಾಷಾ ಸಾಬ್, ಬಿಎಸ್ಎನ್ಎಲ್ ಶ್ರೀಧರ್, ಫ್ಯಾನ್ಸಿ ರಮೇಶ್, ಕೆರೆಹಳ್ಳಿ ರವಿ, ಆರ್. ಡಿ. ಶೀಲಾ, ಲೇಖನ, ಸ್ವಾತಿ, ಸೀಮಾ ಸೇರಿದಂತೆ ಇನ್ನಿತರರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!