Ripponpet | ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ – ಏನೆಲ್ಲ ಕಾರ್ಯಕ್ರಮಗಳಿವೆ ಗೊತ್ತಾ ?

ರಿಪ್ಪನ್‌ಪೇಟೆ: ಇಲ್ಲಿನ ಕಸ್ತೂರಿ ಕನ್ನಡ ಸಂಘ ಮತ್ತು ದಿ|| ಪುನೀತ್‌ ರಾಜ್‍ಕುಮಾರ್ ಅಭಿಮಾನಿ ಬಳಗದ 3ನೇ ವರ್ಷದ ವಾರ್ಷಿಕೋತ್ಸವ ಮತ್ತು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ||ಪುನೀತ್‌ ರಾಜ್‍ಕುಮಾರ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಉಲ್ಲಾಸ್ ತೆಂಕೋಲ ಮತ್ತು ಆರ್.ಎ.ಚಾಬುಸಾಬ್ ಹಾಗೂ ಮೆಣಸೆ ಆನಂದ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಟೋಬರ್ 31 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗಾಗಿ ಆಟೋಟ ಸ್ಪರ್ಧೆಗಳನ್ನು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಆರತಿ ತಟ್ಟೆ ಅಲಂಕಾರ ಹಾಗೂ ಸಂಗೀತಾ ಕುರ್ಚಿ ನಂತರ ಮಧ್ಯಾಹ್ನ 2 ಗಂಟೆಗೆ ಮಹಿಳೆಯರಿಗೆ ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 1 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ವಿವಿಧ ಮಹಿಳಾ ಸಂಘದವರಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಶಾಲಾ ಮಕ್ಕಳ ವಿವಿಧ ವೇಷ ಭೂಷಣದೊಂದಿಗೆ ಹೆಸರಾಂತ ಕಲಾ ತಂಡಗಳ ಕಲಾ ಮೆರಗಿನೊಂದಿಗೆ `ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರ ಮೆರವಣಿಗೆ’ 10 ಗಂಟೆಗೆ ಕನ್ನಡ ಧ್ವಜಾರೋಹಣ,11 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ.

ರಾಜ್ಯೋತ್ಸವದ ಆಂಗವಾಗಿ ಶಾಲಾ-ಕಾಲೇಜ್ ವಿದ್ಯಾಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ನಂತರ ರಾತ್ರಿ 8 ಗಂಟೆಗೆ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು|| ಸಾದ್ವಿನಿ ಕೊಪ್ಪ, ಪ್ರಖ್ಯಾತ ಗಾಯನ ಕಲಾವಿದರಾದ ಮೆಹಬೂಬ್‌ಸಾಬ್, ಅಶ್ವಿನ್‌ಶರ್ಮ, ಎದೆ ತುಂಬಿ ಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್, ಇವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಜನಪರ ಹೋರಾಟವೇದಿಕೆಯ ಅಧ್ಯಕ್ಷ ಆರ್.ಎನ್.ಮಂಜುನಾಥ, ಜಾನಪದ ಕಲಾ ಪರಿಷತ್ ಜಿಲ್ಲಾ ಪ್ರಮುಖ ಮಂಜುನಾಥ ಕಾಮತ್, ಜಿ.ಡಿ.ಮಲ್ಲಿಕಾರ್ಜುನ, ಆರ್.ಡಿ.ಶೀಲಾ, ಸ್ವಾತಿ,ಬಿ.ಎಸ್.ಎನ್.ಎಲ್. ಶ್ರೀಧರ, ರಮೇಶ್‌ ಫ್ಯಾನ್ಸಿ, ನಾಗರಾಜ ಕೆದಲುಗುಡ್ಡೆ ಇನ್ನಿತರ ಹಲವರು ಹಾಜರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

3 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

6 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

7 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

11 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

13 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago