ಸಾಗರ: ಶಾಲೆಯ ಬಹುಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ಪೈಪ್ಗಳನ್ನ ಕಳವು ಮಾಡಿದ ಪ್ರಕರಣವನ್ನು ಸಾಗರ ಗ್ರಾಮಾಂತರ ಪೊಲೀಸರು ಬೇಧಿಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಪೈಪ್ಗಳು ಮತ್ತು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಸಾಗರ ತಾಲ್ಲೂಕಿನ ಹೆಗ್ಗೋಡಿನ ಕೇಡಲಸರ ಶಾಲಾ ಆವರಣದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಳವಡಿಸಲು ಸಂಗ್ರಹಿಸಿಟ್ಟಿದ್ದ ಪೈಪ್ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆಯ ಬಗ್ಗೆ ಪ್ರಾಜೆಕ್ಟ್ ಮ್ಯಾನೇಜರ್ ಕೃಷ್ಣಪ್ರಸಾದ್ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸಾಗರದ ಪೊಲೀಸ್ ಉಪಾಧೀಕ್ಷಕರು ಗೋಪಾಲಕೃಷ್ಣ ಟಿ. ನಾಯ್ಕ, ಮೇಲ್ವಿಚಾರಣೆಯಲ್ಲಿ, ಪಿಐ ಮಹಾಬಲೇಶ್ವರ, ಪಿಎಸ್ಐ ನಾರಾಯಣ ಮಧುಗಿರಿ ಹಾಗೂ ಸಿಬ್ಬಂಧಿಗಳಾದ ಹೆಚ್.ಸಿ, ಸನಾವುಲ್ಲಾ, ಫೈರೋಜ್ ಅಹಮದ್ ಮತ್ತು ಸಿಪಿಸಿ ರವಿಕುಮಾರ್ರವರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ತನಿಖಾ ತಂಡವು ಹೊಸೂರು ಗ್ರಾಮದ ನಿವಾಸಿ ವೇಗರಾಜ್ (40) ನನ್ನು ಬಂಧಿಸಿ ಆತನಿಂದ ಅಂದಾಜು 1,15,000 ರೂ. ಮೌಲ್ಯದ ಪೈಪ್ ಬಂಡಲ್, ಕೃತ್ಯಕ್ಕೆ ಬಳಸಿದ ಟಾಟಾ ಸೂಪರ್ ಏಸ್ ಮಿಂಟ್ ವಾಹನ ವಶಪಡಿಸಿಕೊಂಡಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…