Shivamogga | ಭಾಗ್ಯಲಕ್ಷ್ಮೀ ಧಾರಾವಾಹಿ ನಟಿಯರಿಂದ ಮಹಿಳಾ ದಸರಾ ಉದ್ಘಾಟನೆ

0 68

ಶಿವಮೊಗ್ಗ: ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾ ಅಂಗವಾಗಿ ಅ.16ರಂದು ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಮಹಿಳಾ ದಸರಾವನ್ನು ಭಾಗ್ಯಲಕ್ಷ್ಮೀ ಧಾರಾವಾಹಿ ನಟಿಯರಾದ ಪದ್ಮಜಾ ರಾವ್ ಹಾಗೂ ಸುಷ್ಮಾ ಅವರು ಉದ್ಘಾಟಿಸಲಿದ್ದಾರೆ ಎಂದು ಸಮಿತಿಯ ಸದಸ್ಯೆ ಆರತಿ ಆ.ಮಾ. ಪ್ರಕಾಶ್ ತಿಳಿಸಿದರು.


ಅವರು ಶನಿವಾರ ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪರ‍್ಯಾ ನಾಯ್ಕ, ಡಿ.ಎಸ್. ಅರುಣ್, ಮೇಯರ್ ಎಸ್.ಶಿವಕುಮಾರ್, ತೇಜಸ್ವಿನಿ ಬಿ.ವೈ. ರಾಘವೇಂದ್ರ, ಪ್ರತಿಭಾ ಡಿ.ಎಸ್. ಅರುಣ್, ರೂಪಾ ಎಸ್. ಶಿವಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ. ನಂತರ ನಗರದ ವಿವಿಧ ಮಹಿಳಾ ಸಂಘಟನೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಎಸ್. ಜ್ಞಾನೇಶ್ವರ್, ಮಂಜುಳಾ ಶಿವಣ್ಣ, ಲಕ್ಷ್ಮಿ ಶಂಕರ ನಾಯಕ ಇನ್ನಿತರರಿದ್ದರು.

Leave A Reply

Your email address will not be published.

error: Content is protected !!