ಶಿವಮೊಗ್ಗ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡರ ಇವರ ನಿರ್ದೇಶನದಂತೆ ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ವತಿಯಿಂದ ಶನಿವಾರ ಶಿವಮೊಗ್ಗ ತಾಲ್ಲೂಕಿನ ಹೊಳೆಬೆನ್ನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮೇ 10 ರಂದು ಮತದಾನ ಮಾಡಲು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಕಾಂತ ಕೆ.ಎಸ್ ರವರಿಂದ ಮತದಾನ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಮಾಹಿತಿ ನೀಡಲಾಯಿತು.
ನಗರದ ಗಾಂಧಿ ಬಜಾರ್ ನಲ್ಲಿ ವಾಣಿಜ್ಯ ಮಳಿಗೆಗಳಿಗೆ, ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರಿಗೆ ಮತದಾನದ ಆಮಂತ್ರಣ ನೀಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.