Shivamogga | ಮತ ಎಣಿಕೆ ಹಿನ್ನೆಲೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಮತ ಎಣಿಕೆ ಕಾರ್ಯವು ದಿನಾಂಕ: 13-05-2023 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 12-05-2023 ರ ಸಂಜೆ 6-00 ಗಂಟೆಯಿಂದ ದಿನಾಂಕಃ 14-05-2023 ರ ರಾತ್ರಿ 10-00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ಕಲಂ 144 ರಿತ್ಯಾ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶಿಸಿರುತ್ತಾರೆ.

 • ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 12-05-2023 ರ ಸಂಜೆ 6-00 ಗಂಟೆಯಿಂದ ದಿನಾಂಕಃ 14-05-2023 ರ ರಾತ್ರಿ 10-00 ಗಂಟೆಯ ವರೆಗೆ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿದೆ.
 1. ಯಾವುದೇ ರೀತಿಯ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ.
 2. ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು, ಕೋಲು, ಬಂದೂಕು, ಲಾಠಿ, ಯಾವುದೇ ಮಾರಕಾಸ್ತ್ರ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು / ಶೇಖರಿಸುವುದನ್ನು ನಿಷೇಧಿಸಿದೆ.
 3. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
 4. ಗೆದ್ದ ಅಭ್ಯರ್ಥಿಗಳ ಮರವಣಿಗೆ ಹಾಗೂ ಪಟಾಕಿ / ಬಾಣ / ಬಿರುಸುಗಳನ್ನು ಹಚ್ಚುವುದು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳು, ಗೆಲುವಿನ ಸಂಭ್ರಮಗಳನ್ನು ನಡೆಸುವಂತಿಲ್ಲ..
 5. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿಯ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.
 6. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
 7. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿರುವುದನ್ನು ನಿಷೇಧಿಸಲಾಗಿದೆ.
 8. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.
 9. ಮಾನ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿರುವ ಪ್ರದೇಶದಲ್ಲಿ ಪ್ರವೇಶಿಸುವುದನ್ನು ನಿಷೇಧಿಸಿದೆ.
 10. ಯಾವುದೇ ವ್ಯಕ್ತಿಯು ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಅಧಿಕಾರವಿದ್ದು, ಅಂತಹ ವ್ಯಕ್ತಿಗಳ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
 11. ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವುದು.

ಕಾನೂನು ಉಲ್ಲಂಘನೆ ಸನ್ನಿವೇಶಗಳು ಕಂಡು ಬಂದಲ್ಲಿ, ಕಟ್ಟುನಿಟ್ಟಾಗಿ ಕಾನೂ ಕ್ರಮ ಕೈಗೊಳ್ಳಲಾಗುವುದು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Articles

error: Content is protected !!