Shivamogga | ರಾಗಿಗುಡ್ಡ ಘಟನೆಯ ಸತ್ಯಾಂಶ ಹೊರಬರಬೇಕು ; ಎಸ್‌ಪಿ ಭೇಟಿ ಮಾಡಿ ಕಾಂಗ್ರೆಸ್ ಮುಖಂಡರಿಂದ ಮನವಿ

0 138

ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶಗಳನ್ನು ತಿಳಿಸಬೇಕು. ಮತ್ತು ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.


ರಾಗಿಗುಡ್ಡದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರವಾದುದು. ಶಾಂತಿಗೆ ಹೆಸರಾದ ಶಿವಮೊಗ್ಗದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಲೇಬೇಕು. ಆದರೆ ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶಗಳು ಹೊರಬರಬೇಕು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯಾವ ಅತಿರೇಕವೂ ಸರಿಯಲ್ಲ ಎಂದು ಮುಖಂಡರು ತಿಳಿಸಿದರು.


ಈಸಂದರ್ಭದಲ್ಲಿ ಪ್ರಮುಖರಾದ ಹೆಚ್.ಸಿ ಯೋಗೀಶ್, ಆರ್. ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಬಾಬು, ಪರ್ವಿಜ್, ಭಕ್ಷಿ, ಮೂರ್ತಿ, ಶಿವಕುಮಾರ್, ಶಿವಾನಂದ ಮೊದಲಾದವರಿದ್ದರು.

Leave A Reply

Your email address will not be published.

error: Content is protected !!