Shivamogga | ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಿದ್ದತೆ ; ಡಿಸಿ


ಶಿವಮೊಗ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.


ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,28,886 ಪುರುಷ, 7,43,713 ಮಹಿಳಾ, 32 ಇತರೆ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 14,73,327 ಮತದಾರರಿದ್ದಾರೆ.


ಮತಗಟ್ಟೆ & ಅಧಿಕಾರಿಗಳ ನೇಮಕ:

ಜಿಲ್ಲಾ ವ್ಯಾಪ್ತಿಯಲ್ಲಿ 1775 + 07 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2050 ಪಿಆರ್‍ಓ, 2050 ಎಪಿಆರ್‍ಓ, 4100 ಪಿಓ ಸೇರಿದಂತೆ ಒಟ್ಟು 8200 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.


ಬಸ್ ನಿಯೋಜನೆ:

ಒಟ್ಟು 8156 ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್‍ಗಳನ್ನು ನಿಯೋಜಿಸಲಾಗಿದೆ.


ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಸ್ಥಳ : ಶಿವಮೊಗ್ಗ ಗ್ರಾಮಾಂತರ -111 ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹೆಚ್ ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮತ್ತು ಎಸ್.ಆರ್.ನಾಗಪ್ಪಶೆಟ್ರಿ ಸ್ಮರಕ ರಾಷ್ಟ್ರೀಯ ಅನ್ವಯಿಕ ಸೈನ್ಸ್ ಪಿಯು ಕಾಲೇಜ್, ಶಿವಮೊಗ್ಗ. ಭದ್ರಾವತಿ-112 ಸಂಚಿ ಹೊನ್ನಮ್ಮ ಬಾಲಿಕ ಪಪೂ ಕಾಲೇಜು ಭದ್ರಾವತಿ. ಶಿವಮೊಗ್ಗ-113 ಸಹ್ಯಾದ್ರಿ ವಾಣಿಜ್ಯ ಕಾಲೇಜ್ ಶಿವಮೊಗ್ಗ. ತೀರ್ಥಹಳ್ಳಿ-114 ಡಾ.ಯು.ಆರ್ ಅನಂತಮೂರ್ತಿ ಕಾಲೇಜು ತೀರ್ಥಹಳ್ಳಿ. ಶಿಕಾರಿಪುರ-115 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ. ಸೊರಬ-116 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೊರಬ. ಸಾಗರ-117 ಸರ್ಕಾರಿ ಪದವಿಪೂರ್ವ ಕಾಲೇಜು ಸಾಗರ. ಮತ ಎಣಿಕೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Articles

error: Content is protected !!