Categories: Shivamogga

Shivamogga | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ ; ಡಿಸಿ ಡಾ|| ಆರ್.ಸೆಲ್ವಮಣಿ


ಶಿವಮೊಗ್ಗ : ಜಿಲ್ಲೆಯಲ್ಲಿನ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ನಿಯಮಾನುಸಾರ ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹಿರಿಯ ಗಣಿ ಮತ್ತು ಭೂವಿಜ್ಞಾನಿ ಸಿ.ಎಸ್.ನವೀನ್ ಅವರಿಗೆ ಸೂಚಿಸಿದರು.


ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಪರವಾನಿಗೆ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಿಸುವವರ ವಿರುದ್ಧ ಕೈಗೊಂಡ ಕಾನೂನು ಕ್ರಮಗಳು ಹಾಗೂ ದಂಡ ವಿಧಿಸಿರುವ ಕುರಿತು ಅಕ್ರಮ ಉಪಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಕ್ರಮ ಮರಳು ಸಾಗಾಣಿಕೆ ಮತ್ತು ನಿಯಂತ್ರಣ ವಿರುದ್ಧ ಕೈಗೊಂಡ ಕ್ರಮ ಆಶಾದಾಯಕವಾಗಿಲ್ಲ. ಮರಳು ನಿಯಂತ್ರಣ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ-ಸಿಬ್ಬಂಧಿಗಳು ಕೂಡಲೇ ಪ್ರವೃತ್ತರಾಗಿ ನಿರೀಕ್ಷಿತ ಪ್ರಗತಿ ಸಾಧಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.


ಗಣಿ ಗುತ್ತಿಗೆ ಪೂರ್ಣಗೊಂಡಿರುವ ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಪ್ರದೇಶವನ್ನು ವಿಲೇಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಸದರಿ ಸ್ಥಳದಲ್ಲಿ ನಡೆಯುತ್ತಿರುವ ಅನಧಿಕೃತ ಗಣಿಗಾರಿಕೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾಗರ ಮತ್ತು ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಲ್ಯಾಟರೈಟ್ ಗಣಿಗಾರಿಕೆಗೆ ಸಂಬಂಧಿಸಿದಂತೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಕ್ರಮದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಅದಕ್ಕಾಗಿ ಬಳಸುತ್ತಿರುವ ವಾಹನಗಳನ್ನು ಜಪ್ತಿ ಮಾಡುವಂತೆೆ ಜಿಲ್ಲಾಧಿಕಾರಿಗಳು ಸೂಚಿಸಿದರು.


ಹೊಸ ಮರಳು ನೀತಿ-2020ರನ್ವಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮರಳು ಎತ್ತುವಳಿಗೆ ಅನುಮತಿ ನೀಡಿರುವ ಪ್ರದೇಶಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಂಡು, ಮುಂದಿನ ಒಂದು ವಾರದೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.


ಅನಧಿಕೃತವಾಗಿ ಸಂಗ್ರಹಿಸಲಾಗಿರುವ ಹಾಗೂ ವಶಪಡಿಸಿಕೊಳ್ಳಲಾಗಿರುವ ಮರಳನ್ನು ಈಗಾಗಲೇ ದರ ನಿಗಧಿಪಡಿಸಿದ ನಿಯಮಾನುಸಾರ ಸಂಬಂಧಪಟ್ಟ ಇಲಾಖೆಗಳು ವಿಲೇವಾರಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು,  ಅನಧಿಕೃತ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ತಾಲೂಕು ಮರಳು ಉಸ್ತುವಾರಿ ಸಮಿತಿ ಸಭೆಗಳನ್ನು ನಿಯಮಿತವಾಗಿ ಆಯೋಜಿಸುವ ಹಾಗೂ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸಲು ನಿಯೋಜಿತ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚಿಸಿದರು.


ಇದೇ ಸಂದರ್ಭದಲ್ಲಿ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮದನ್ವಯ ಸಭೆಯಲ್ಲಿ ಪ್ರಸ್ತಾಪಿಸಿರುವ 04 ಜಲ್ಲಿ ಕ್ರಷರ್ ಘಟಕಗಳ ಅವಧಿಯನ್ನು ಮುಂದಿನ 20ವರ್ಷಗಳ ಅವಧಿಗೆ ವಿಸ್ತರಿಸಲು ಅನುಮೋದನೆ ನೀಡಲಾಯಿತು.


ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅರಣ್ಯಾಧಿಕಾರಿ ಶಿವಶಂಕರ್, ಹಿರಿಯ ಭೂವಿಜ್ಞಾನಿ ಸಿ.ಎಸ್.ನವೀನ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

5 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

5 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago