Categories: Shivamogga

Shivamogga | ಆಯುಧ ಪೂಜೆ ಮತ್ತು ವಿಜಯದಶಮಿ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರು

ಶಿವಮೊಗ್ಗ :  ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದೆ. ರಾಶಿಗಟ್ಟಲೆ ಬೂದುಗುಂಬಳ, ಬಾಳೆಕಂದು, ಹೂವು ಮಾರುಕಟ್ಟೆಗೆ ಬಂದಿವೆ.

ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಗಾಂಧಿಬಜಾರ್ ನಲ್ಲಿ ಜನಸಂದಣಿ ಹೆಚ್ಚಾಗಿತ್ತು. ಶಿವಪ್ಪ ನಾಯಕ ವೃತ್ತ, ಬಿಹೆಚ್ ರಸ್ತೆ, ನೆಹರು ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ, ಲಕ್ಷ್ಮಿ ಟಾಕೀಸ್, ಪೊಲೀಸ್ ಚೌಕಿ, ಗೋಪಾಳ, ವಿನೋಬನಗರ, ಸಾಗರ ರಸ್ತೆ ಸೇರಿದಂತೆ ವಿವಿಧಡೆ ಹೂವು, ಹಣ್ಣು, ಬಾಳೆಕಂದು ಮತ್ತಿತರ ಪೂಜಾ ಸಾಮಗ್ರಿಗಳ ಮಾರಾಟ ಜೋರಾಗಿ ನಡೆದಿತ್ತು.

ಆಯುಧ ಪೂಜೆಯಂದು ವಾಹನ, ಯಂತ್ರಗಳು, ಮಾರಾಟ ಮಳಿಗೆಗಳಿಗೆ ಪೂಜೆ ಸಲ್ಲಿಸಲು ಬೂದುಗುಂಬಳ ಮತ್ತು ನಿಂಬೆಹಣ್ಣು ಹೆಚ್ಚಾಗಿ ಬಳಸಲಾಗುತ್ತದೆ. ಹೀಗಾಗಿ ಇವುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಲೋಡ್‌ಗಟ್ಟಲೆ ಬೂದಗುಂಬಳ ಮತ್ತು ನಿಂಬೆಹಣ್ಣು ಮಾರುಕಟ್ಟೆಗೆ ಬಂದಿದ್ದು, ಖರೀದಿ ಪ್ರಕ್ರಿಯೆಯು ಬಲು ಜೋರಾಗಿ ಸಾಗಿದೆ.

ಆಯುಧ ಪೂಜೆಯಂದು ಆಯುಧಗಳಿಗೆ ಮಾತ್ರವಲ್ಲದೆ, ವಾಹನಗಳಿಗೆ, ಯಂತ್ರೋಪಕರಣಗಳಿಗೆ, ಕೃಷಿ ಉಪಕರಣಗಳಿಗೆ ಪೂಜೆ ಸಲ್ಲಿಸಿರುವ ಸಂಪ್ರದಾಯ ಇರುವುದರಿಂದ ಜನರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮಾಲೀಕರು ಹಾಗೂ ಸಿಬ್ಬಂದಿ ಬೆಳಿಗ್ಗೆಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. 

ಜನಸಂದಣಿ:

ಹಬ್ಬದ ಕಾರಣಕ್ಕೆ ಜನಸಂದಣಿ ಹೆಚ್ಚಿತ್ತು. ಬೆಳಿಗ್ಗೆಯಿಂದಲೇ ಜನರು ಪೇಟೆಗೆ ಬಂದು ಹಬ್ಬದ ಆಚರಣೆಗೆ ಬೇಕಾದ ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದರು. ಪೂಜೆಗಾಗಿ ಹೂವು, ನಿಂಬೆ ಹಣ್ಣು, ಬೂದು ಕುಂಬಳಕಾಯಿ, ಬಾಳೆ ಕಂದು, ಮಾವಿನ ಸೊಪ್ಪು, ಹಣ್ಣು ಹಂಪಲು, ಅರಿಸಿನ, ಕುಂಕುಮ ಸೇರಿದಂತೆ ವಿವಿಧ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು. 

ವ್ಯಾಪಾರಿಗಳು ರಸ್ತೆ ಬದಿಯಲ್ಲಿ ತಳ್ಳುಗಾಡಿಗಳಲ್ಲಿ ಹೂವು, ಹಣ್ಣು, ಬಾಳೆಕಂದು, ಮಾವಿನ ಸೊಪ್ಪು, ನಿಂಬೆ ಹಣ್ಣುಗಳನ್ನು ರಾಶಿ ಹಾಕಿ ಮಾರಾಟ ಮಾಡುತ್ತಿದ್ದರು. ವಾಹನಗಳು, ಅಂಗಡಿಗಳನ್ನು ಅಲಂಕರಿಸಲು ಬಳಸುವ ಕೃತಕ ಹಾರಗಳು, ಇತರೆ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುವವರ ಸಂಖ್ಯೆಯೂ ಹೆಚ್ಚಿತ್ತು. 

ಕುಂಬಳಕಾಯಿಗೆ ಬೇಡಿಕೆ ಕಡಿಮೆ: ವ್ಯಾಪಾರಿಗಳು ಬೂದುಕುಂಬಳಕಾಯಿ ರಾಶಿ ಹಾಕಿದ್ದರು. 30 ರೂ. ನಿಂದ 300 ರೂ. ವರೆಗೆ ಬೂದು ಕುಂಬಳಕಾಯಿ ಬೆಲೆ ಇತ್ತು. 

ನಿಂಬೆಹಣ್ಣಿಗೆ ಗಾತ್ರಕ್ಕೆ ಅನುಗುಣವಾಗಿ 4 ರೂ.ನಿಂದ 10 ರೂ. ರವರೆಗೆ ಬೆಲೆ ಇತ್ತು. ಬಾಳೆಕಂದು, ಕಬ್ಬಿನ ಪೈರು, ಮಾವಿನಸೊಪ್ಪು ವ್ಯಾಪಾರ ಭರ್ಜರಿಯಾಗಿ ಸಾಗಿದೆ.

ಹಬ್ಬವು ತರಕಾರಿ, ಹಣ್ಣುಗಳ ಧಾರಣೆ ಮೇಲೆ ಪ್ರಭಾವ ಬೀರಿಲ್ಲ. ಏಲಕ್ಕಿ ಬಾಳೆಹಣ್ಣಿಗೆ ಕೆಜಿಗೆ 120ರೂ., ಪಚ್ಚೆ ಬಾಳೆ ಹಣ್ಣಿಗೆ 50 ರೂ. ಇತ್ತು. 

ಹಬ್ಬದ ಕಾರಣ ಹೂವುಗಳು ದುಬಾರಿಯಾಗಿವೆ. ಬೆಲೆ ಹೆಚ್ಚಾಗಿದ್ದರೂ ಜನರು ಹೂವಿನ ಖರೀದಿಯಲ್ಲಿ ತೊಡಗಿದ್ದರು. ಬಿಡಿ ಹೂವಿನ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಚೆಂಡು ಹೂ ಸೇವಂತಿಗೆ ಹೂವುಗಳನ್ನು ರಾಶಿ ಹಾಕಿ ಮಾರಾಟ ಮಾಡುತ್ತಿದ್ದರು. ಸೇವಂತಿಗೆಗೆ 80ರಿಂದ 100 ರೂ., ಮಲ್ಲಿಗೆ ಹೂವು ಮಾರೊಂದಕ್ಕೆ 100ರಿಂದ 150 ರೂ., ಚೆಂಡು ಹೂವು ಒಂದು ಮಾರಿಗೆ 20ರಿಂದ 30 ರೂ. ಇತ್ತು. ಚಂಡು ಹೂ ಮಾರೊಂದಕ್ಕೆ 40 ರಿಂದ 50 ರೂ. ಇತ್ತು.

ವಾಹನ ಖರೀದಿ :

ನವರಾತ್ರಿ ಸಮಯದಲ್ಲಿ ಆಯುಧಪೂಜೆ ವಿಜಯದಶಮಿ ದಿನ ನೋಡಿ ಜನರು ವಾಹನ ಖರೀದಿಸುತ್ತಾರೆ.  ಆಯುಧಪೂಜೆ ಅಂಗವಾಗಿ ಬಹುತೇಕ ಶೋರೂಂ ಗಳು ರಜಾ ಇರುವುದರಿಂದ ಭಾನುವಾರವೇ ಹಲವರು ಹೊಸ ವಾಹನದ ಕೀ ಪಡೆದುಕೊಂಡರು. ನಗರದ ದ್ವಿಚಕ್ರವಾಹನಗಳ ಮಳಿಗೆಗಳ ಮುಂದೆ ಹೆಚ್ಚು ಗ್ರಾಹಕರು ಇದ್ದರು. ಗೃಹಪಯೋಗಿ ಮಾರಾಟ ಮಳಿಗೆಗಳಲ್ಲೂ ಸಾಕಷ್ಟು ಗ್ರಾಹಕರು ಕಂಡುಬಂದರು. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಘಟನೆ ಕಂಡುಬಂದಿತು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago