Categories: Shivamogga

Shivamogga | ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ; ರೈತ ಸಂಘ ವತಿಯಿಂದ ಪ್ರತಿಭಟನೆ

ಶಿವಮೊಗ್ಗ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈತ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.


ಈ ವರ್ಷ  ಕರ್ನಾಟಕ ಕರಾಳ ಬರಗಾಲದಲ್ಲಿದೆ. ಆದಾಗ್ಯೂ ಕಾವೇರಿ ನೀರು ನಿಯಂತ್ರಣ ಮಂಡಳಿ ತಮಿಳುನಾಡಿಗೆ ಪ್ರತಿನಿತ್ಯ ಮೊದಲು 5000 ಕ್ಯೂಸೆಕ್, ಪ್ರತಿಭಟನೆಯ ನಂತರ 3000 ಕ್ಯೂಸೆಕ್ ನೀರನ್ನು ಬಿಡುವಂತೆ ಆದೇಶಿಸಿರುವುದು ಆಘಾತಕಾರಿಯಾಗಿದೆ. ಈ ನಿಯಂತ್ರಣ ಮಂಡಳಿಯ ಮುಂದೆ ಸಂಕಷ್ಟ ಕಾಲದ ಸೂತ್ರವನ್ನು ಜಾರಿಗೆ ತರುವಂತೆ ಗಮನಸೆಳೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.


ಕಾವೇರಿ ನೀರಿನ ಮೇಲೆ ಅವಲಂಬಿತರಾದ ಕೃಷಿಕರು ಸಂಪೂರ್ಣ ನಾಶವಾಗುತ್ತಾರೆ. ಅಲ್ಲದೆ ಕಾವೇರಿ ನದಿ ಪಾತ್ರದ ಅನೇಕ ಮಹಾನಗರ-ಪಟ್ಟಣಗಳ ನಾಗರೀಕರು ಜಲಕ್ಷಾಮಕ್ಕೆ ತುತ್ತಾಗಲಿದ್ದಾರೆ. ಆದ್ದರಿಂದ ಕೂಡಲೇ ಈ ಜಲಕ್ಷಾಮದ ಪರಿಸ್ಥಿತಿಯಲ್ಲಿ ಪ್ರಧಾನಿಗಳನ್ನು ಮಧ್ಯೆ ಪ್ರವೇಶಿಸುವಂತೆ ಮಾಡಿ ಕೂಡಲೇ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಈ ವರ್ಷ ಹಿಂದಿನ ವರ್ಷಗಳಿಗಿಂತ ಅಣೆಕಟ್ಟೆಗೆ ಕಡಿಮೆ ಒಳಹರಿವು ಬಂದಿದ್ದು ಪೂರ್ಣ ಪ್ರಮಾಣದಲ್ಲಿ ಅಣೆಕಟ್ಟೆಗೆ ನೀರು ಬಂದಿರುವುದಿಲ್ಲ. ಆದರೂ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿದೆ ಇದನ್ನು ತಕ್ಷಣವೇ ನಿಲ್ಲಿಸಬೇಕು. ಮತ್ತು ಈ ರಾಜ್ಯದ ರೈತರ ಮತ್ತು ನಾಗರೀಕರ ಹಿತದೃಷ್ಟಿಯಿಂದ ಮುಂದಿನ ಎಲ್ಲ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಬೇಕು. ಶೀಘ್ರದಲ್ಲಿ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುಖಾಂತರ ಕಾವೇರಿ ನೀರಿಗೆ ಪರ್ಯಾಯ ಸುರಕ್ಷತಾ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.


ನೀರು ಹಂಚಿಕೆಯ ವಿಚಾರದಲ್ಲಿ ಹಿಂದಿನಿಂದಲೂ ಸಹ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈಗಲೂ ಮುಂದುವರಿಯುತ್ತಿದೆ. ಅಂತರ್‌ರಾಜ್ಯ ನದಿ ನೀರು ಮಾರ್ಗಸೂಚಿ ಈವರೆಗೂ ಹಂಚಿಕೆ ಸೂತ್ರ ವಿಚಾರವಾಗಿ ರಾಷ್ಟ್ರೀಯ ಮಾಡಿಲ್ಲವಾದಕಾರಣ ಕಾವೇರಿ ಪ್ರಾಧಿಕಾರದಲ್ಲಿ ಅವೈಜ್ಞಾನಿಕ ತೀರ್ಮಾನಗಳಾಗುತ್ತಿವೆ. ಸುಪ್ರೀಂ ಕೋರ್ಟ್ ಸಹ ಈ ತೀರ್ಮಾನವನ್ನು ಎತ್ತಿಹಿಡಿಯುತ್ತಿದೆ. ಕೂಡಲೇ ರಾಜ್ಯ ಸರ್ಕಾರ ರಾಷ್ಟ್ರೀಯ ಜಲನೀತಿ ರೂಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದರು.


ಕೇಂದ್ರ ಸರ್ಕಾರ ಕೂಡಲೇ ಎರಡು ರಾಜ್ಯದ ತಜ್ಞರ ಸಭೆ ಕರೆದು ತೀರ್ಮಾನಿಸಿ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಿಕೊಡಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕೂಡಲೇ ನಿಲ್ಲಿಸಿ ಸುಪ್ರೀಂ ಕೋರ್ಟ್‌ಗೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದರು.


ನೀರು ಹಂಚಿಕೆಯ ಸಮಿತಿಗೆ ತಜ್ಞರೊಂದಿಗೆ ಆಯಾ ಪ್ರದೇಶದ ಫಲಾನುಭವಿ ರೈತರನ್ನೊಳಗೊಂಡ ಸಮಿತಿಯನ್ನು ರಚಿಸಬೇಕು. ಕರ್ನಾಟಕ ರಾಜ್ಯದ ಕಾವೇರಿ, ಕೃಷ್ಣ, ಮಹಾದಾಯಿ ನದಿಗಳ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಸರ್ಕಾರ ರಾಜ್ಯಕ್ಕೆ ಮೊದಲು ಆದ್ಯತೆ ನೀಡಿ ರಾಜ್ಯದ ರೈತರ ಹಿತ ಕಾಪಾಡಬೇಕು. ಕರ್ನಾಟಕದ ಎಲ್ಲಾ ನೀರಾವರಿ ಯೋಜನೆಗಳನ್ನು ಆಂಧ್ರ ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ಯುದ್ಧೋಪಾಧಿಯಲ್ಲಿ ಕೈಗೊಂಡು ನೀರಿನ ಬವಣೆಯಲ್ಲಿರುವ ರಾಜ್ಯದ ರೈತರಿಗೆ ನೆರವಾಗಬೇಕು ಎಂದರು.


ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡ ಹೆಚ್.ಆರ್. ಬಸವರಾಜಪ್ಪ, ಕೆ.ರಾಘವೇಂದ್ರ ಟಿ.ಎಂ. ಚಂದ್ರಪ್ಪ., ಪಿ,ಡಿ ಮಂಜಪ್ಪ, ಹಿಟ್ಟೂರು ರಾಜು, ಜಿ.ಎನ್. ಪಂಚಾಕ್ಷರಿ, ಜ್ಞಾನೆಶ್, ಸಿ. ಚಂದ್ರಪ್ಪ, ಕಸೆಟ್ಟಿ ರುದ್ರೇಶ್ ಮತ್ತಿತರರು ಇದ್ದರು.

ಡಿಸಿಗೆ ಮನವಿ :

ಶಿವಮೊಗ್ಗ: ಕಾವೇರಿ ನೀರಿಗಾಗಿ ರೈತರ ಹೋರಾಟಕ್ಕೆ ಬೆಂಬಲಿಸಿ ಇಂದು ಜಯ ಕರ್ನಾಟಕ ಜನಪರ ವೇದಿಕೆ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಕಾವೇರಿ ನದಿ ನೀರು ವಿಚಾರವಾಗಿ ಕಾವೇರಿ ನದಿ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಮಂಡಿಸಿರುವ ವಾದಗಳು ವಿಫಲವಾಗಿವೆ. ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಬಗ್ಗೆ ವಾಸ್ತವಾಂಶ ವಾದ ಮಂಡಿಸುವಲ್ಲಿ ಹಿಂದಿನ ಸರ್ಕಾರಗಳು ಸೇರಿದಂತೆ ಈಗಿನ ಸರ್ಕಾರಗಳು ಕೂಡ ವಿಫಲವಾಗಿವೆ. ಅದೇ ರೀತಿ ಈ ವಿಚಾರದಲ್ಲಿ ಕೇಂದ್ರ ಸರ್ಕಾರವೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕಾವೇರಿ ನದಿ ಪ್ರಾಧಿಕಾರ ವಾಸ್ತವಾಂಶ ಗಣನೆಗೆ ತೆಗೆದುಕೊಳ್ಳದೆ ಇರುವುದನ್ನು ಪ್ರತಿಭಟನಕಾರರು ಖಂಡಿಸಿದರು.


ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ದಿ. ಬಂಗಾರಪ್ಪ ಅವರು ಕಾವೇರಿ ನದಿ ನೀರಿಗಾಗಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದ ಎಲ್ಲಾ ಸಂಸದರು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು. ಅದೇರೀತಿ ಅಂದಿನ ಮಂಡ್ಯದ ಸಂಸದ ಅಂಬರೀಷ್ ಅವರು ಸಹ ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಖಂಡಿಸಿ ರಾಜೀನಾಮೆ ಕೊಟ್ಟಿದ್ದರು. ಇಂತಹ ಯಾವುದೇ ನಿರ್ಧಾರವನ್ನು ಸಂಸದರಾಗಲಿ, ಶಾಸಕರಾಗಲಿ, ತೆಗೆದುಕೊಳ್ಳದಿರುವುದು ವಿಷಾದನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕೂಡಲೇ ಸರ್ಕಾರ ಸುಗ್ರೀವಾಜ್ಞೆ ಮೂಲಕ ರಾಜ್ಯದ ರೈತರಿಗೆ ನೀರು ಉಳಿಸಿಕೊಳ್ಳಬೇಕು. ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಡೆಯಬೇಕು ಮತ್ತು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯದ ಎಲ್ಲಾ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಬೇಕೆಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಎಸ್.ಕೆ. ರಘುವೀರ್ ಸಿಂಗ್, ಪ್ರಮುಖರಾದ ಎಸ್.ಮಲ್ಲೇಶ್, ಹರನಾಥ್ ಸಿಂಗ್, ಶ್ರೀನಿವಾಸ್ ಸೇರಿದಂತೆ ಮುಂತಾದವರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago