Categories: Shivamogga

Shivamogga | ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ; ಡಿಸಿ


ಶಿವಮೊಗ್ಗ : ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 4ನೇ ಸುತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ
ದಿ: 26-09-2023 ರಿಂದ 25-10-2023 ವರೆಗೆ ಉಚಿತವಾಗಿ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುವುದು.


ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದ್ದು, ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕುವರು. ಯಾರೂ ಕೂಡ ತಮ್ಮ ಎಮ್ಮೆ, ದನ ಕರುಗಳು ಲಸಿಕೆಯಿಂದ ವಂಚಿತರಾಗದಂತೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಶೇ.100 ಲಸಿಕಾ ಪ್ರಗತಿ ಸಾಧಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.


ಹೊಸನಗರ, ಸೊರಬ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಕೃತಕ ಗರ್ಭಧಾರಣೆ ಪ್ರಗತಿ ಸ್ವಲ್ಪ ಕಡಿಮೆಯಿದ್ದು, ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಹೋರಿ ಬೆದರಿಸುವವರು ಮುಂಚಿತವಾಗಿ ಪಶುಪಾಲನ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಪಡೆದು 15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದರು.

ಪೆಟ್ ಶಾಪ್ ನೋಂದಣಿ ಕಡ್ಡಾಯ:
ಪ್ರಿವೆನ್ಶನ್ ಆಫ್ ಕ್ರುಯೆಲ್ಟಿ ಟು ಅನಿಮಲ್ಸ್(ಪೆಟ್ ಶಾಪ್)ರೂಲ್ಸ್ 2018 ರ ಪ್ರಕಾರ ಜಿಲ್ಲೆಯ ಪೆಟ್ ಶಾಪ್ ಮಾಲೀಕರು ತಾವು ಉದ್ದಿಮೆ ಪರವಾನಗಿ ತೆಗೆದುಕೊಳ್ಳುವ ಮುನ್ನ ರೂ.5000 ಶುಲ್ಕ ನೀಡಿ ಜಿಲ್ಲಾ ಪ್ರಾಣಿ ದಯಾ ಸಂಘದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಳ್ಳದೇ ಪೆಟ್ ಶಾಪ್ ವಹಿವಾಟು ಮಾಡಿದರೆ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು ಎಂದ ಅವರು ಪ್ರಸ್ತುತ ನೋಂದಣಿಗೆ 15 ಅರ್ಜಿಗಳು ಬಂದಿದ್ದು ಈ ಸಂಬಂಧ ಸಮಿತಿ ರಚಿಸಿ ನಿಯಮಾನುಸಾರ ಅನುಮೋದನೆ ನೀಡುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.


ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1586 ಗ್ರಾಮಗಳಿದ್ದು, 4ನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ 639250 ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 653573 ಸಿರಿಂಜ್‍ಗಳು ಲಭ್ಯವಿದ್ದು ಸರಬರಾಜಾದ ಲಸಿಕೆ ಶೇಖರಿಸಿಡಲು 4 ವಾಕ್ ಇನ್ ಕೂಲರ್ ಮತ್ತು 23 ಐಸ್‍ಲೈನ್ ರೆಫ್ರಿಜರೇಟರ್‍ಗಳಿವೆ ಹಾಗೂ ಒಟ್ಟು 467 ಲಸಿಕಾದಾರರು ಇದ್ದಾರೆ. ಕಳೆದ 3 ನೇ ಲಸಿಕಾ ಅಭಿಯಾನದಲ್ಲಿ 554010 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ.95 ಪ್ರಗತಿ ಸಾಧಿಸಲಾಗಿತ್ತು. ಎಂದು ಮಾಹಿತಿ ನೀಡಿದರು
ಲಸಿಕಾ ಅಭಿಯಾನದ ಮಾಹಿತಿ ವೆಬ್‍ಸೈಟ್ www.ahvs.kar.nic.in ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶಪಾಲನಾ ಇಲಾಖೆಯ ಪಶು ಆಸ್ಪತ್ರೆ ಅಥವಾ ಹಾಲು ಉತ್ಪಾದಕರ ಸಹಕಾ ಸಂಘಗಳನ್ನು ಸಂಪರ್ಕಿಸಬಹುದೆಂದರು.


ಸಭೆಯಲ್ಲಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೊಸ್ಟರ್‍ನ್ನು ಡಿಸಿ ಮತ್ತು ಇತರೆ ಅಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಪಶುವೈದ್ಯರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

11 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

15 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

17 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

18 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago