Categories: Shivamogga

Shivamogga | ಡಿಕೆಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ; ಕೆಎಸ್ಈ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಹಾಗೂ ಕೆಪಿಸಿಸಿ ರಾಜ್ಯ ಸಂಯೋಜಕ ಆರ್. ಮೋಹನ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿಯಮಗಳನ್ನು ಪಾಲಿಸುತ್ತಿದೆ. ಕೆ.ಎಸ್. ಈಶ್ವರಪ್ಪ ಜಲಸಂಪನ್ಮೂಲ ಸಚಿವರೂ ಆಗಿದ್ದವರು. ಅವರಿಗೆ ಇದರ ಅರ್ಥವಾಗದೇ ಡಿ.ಕೆ. ಶಿವಕುಮಾರ್ ಅವರನ್ನು ನೀರಿನ ಕಳ್ಳ ಎಂದು ಅವಮಾನಿಸಿದ್ದಾರೆ. ಆದ್ದರಿಂದ ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ಮನವಿದಾರರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬರಗಾಲ ಇರುವುದು ನಿಜ. ಜಲಾಶಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೀರು ಇಲ್ಲ ಎಂಬುದೂ ನಿಜ. ಆದರೆ, ಡಿ.ಕೆ. ಶಿವಕುಮಾರ್ ಅವರ ಪಾತ್ರ ಇದರಲ್ಲಿ ಏನಿದೆ? ನ್ಯಾಯಾಲಯದ ಆದೇಶಗಳನ್ನು ಗೌರವಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಲಹೆ ಕೊಡಬಹುದಿತ್ತು. ಆದರೆ, ನೀರಿನ ಕಳ್ಳ ಎಂದು ಹೀಯಾಳಿಸಿರುವುದು ಸರಿಯಲ್ಲ ಎಂದು ತಿಳಿಸಿದರು.

ಈಶ್ವರಪ್ಪ ತನ್ನ ಇರುವಿಕೆಗಾಗಿ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಅವರು ತಮ್ಮ ಹಿಂದಿನ ಜೀವನ ನೋಡಿಕೊಳ್ಳಲಿ. ಗುತ್ತಿಗೆದಾರನ ಆತ್ಮಹತ್ಯೆಯ ಹಿನ್ನಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಈಶ್ವರಪ್ಪನವರ ಯೋಗ್ಯತೆ ಬಿಜೆಪಿ ಹೈಕಮಾಂಡ್ ಗೇ ತಿಳಿದಿದೆ. ಆ ಕಾರಣಕ್ಕಾಗಿಯೇ ಅವರಿಗೆ ಟಿಕೆಟ್ ನೀಡಿಲ್ಲ. ಮತ್ತು ಕೆ.ಎಸ್. ಈಶ್ವರಪ್ಪ ಅವರಂತೆ ಡಿ.ಕೆ. ಶಿವಕುಮಾರ್ ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿಲ್ಲ. ಯಾರು ಕಳ್ಳರು? ಯಾರು ಸುಳ್ಳರು? ಎಂದು ಈ ನಾಡಿನ ಜನಕ್ಕೆ ಗೊತ್ತಿದೆ. ಇನ್ನಾದರೂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಒ. ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್, ಪ್ರಮುಖರಾದ ರಂಗಸ್ವಾಮಿ ಗೌಡ, ಟಾಕ್ರಾನಾಯ್ಕ್, ಸಿದ್ದಪ್ಪ, ಗಣೇಶ್, ಶ್ರೀಕಾಂತ್, ಮಂಜು ನಾಯ್ಕ್, ಸುರೇಶ್ ಕಲ್ಮನೆ, ಮುತ್ತಣ್ಣ ಶಿಕಾರಿಪುರ, ಅಮರ್, ಕುರುವಳ್ಳಿ ನಾಗರಾಜ್, ಗಾಜನೂರು ಸುದೀಪ್, ರಾಮಚಂದ್ರನಾಯ್ಕ್, ಸತ್ಯನಾರಾಯಣ್, ಗಾಜನೂರು ನಾಗರಾಜ್, ಲೋಕೇಶ್ ಮೊದಲಾದವರಿದ್ದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

53 mins ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

1 hour ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

2 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

2 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

4 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

7 hours ago