Categories: Shivamogga

Shivamogga | ತ್ವರಿತವಾಗಿ ಭೂಸ್ವಾದೀನ ಪ್ರಕ್ರಿಯೆ ಪೂರ್ಣಗೊಳಿಸಿ ; ಡಾ|| ಆರ್.ಸೆಲ್ವಮಣಿ

ಶಿವಮೊಗ್ಗ : ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ, ವರ್ತುಲ ರಸ್ತೆಗಳು, ಮೇಲ್ಸೇತುವೆ ನಿರ್ಮಾಣ, ರಸ್ತೆ ಅಗಲೀಕರಣ ಮುಂತಾದ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಡ್ಡಿಯಾಗಿರುವ ಭೂಸ್ವಾದೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಾಕೀತು ಮಾಡಿದರು.


ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಫಾರೆಸ್ಟ್ ಕ್ಲಿಯರೆನ್ಸ್, ಭೂಸ್ವಾದೀನ ಹಾಗೂ ಯುಟಿಲಿಟಿ ಶಿಫ್ಟಿಂಗ್‍ಗಳ ಕುರಿತು ಪರಿಶೀಲಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾಮಗಾರಿಗಳನ್ನು ಆರಂಭಿಸಲು ತೊಡಕು ಉಂಟಾಗಿರುವ ಸ್ಥಳಗಳಲ್ಲಿನ ನಿವಾಸಿಗಳು ಅಥವಾ ಭೂಮಾಲೀಕರ ಸಭೆ ಕರೆದು ವಾಸ್ತವ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡಬೇಕು. ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡ ನಂತರ ಭೂಮಾಲೀಕರಿಗೆ ಸರ್ಕಾರ ಈಗಾಗಲೇ ನಿಗಧಿಪಡಿಸಿದ ಪರಿಹಾರಧನವನ್ನು ನಿಯಮಾನುಸಾರ ನೀಡಿ, ಒಪ್ಪಿಗೆ ಪಡೆದು, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದರು.


ಕಾಮಗಾರಿಗಳು ಅನುಮೋದನೆಗೊಂಡು ಅನೇಕ ತಿಂಗಳುಗಳು ಉರುಳಿದರೂ ಭೂಸ್ವಾದೀನ ಪ್ರಕ್ರಿಯೆ ಆರಂಭಿಸಲು ಸರ್ವೇ ಕಾರ್ಯ ಆಗದಿರುವ ತಾಳಗುಪ್ಪ-ಹೊಸೂರು ರೈಲ್ವೇ ಮೇಲ್ಸೇತುವೆ ಕಾಮಗಾರಿ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ-13ರ ರಸ್ತೆ ಅಗಲೀಕರಣ ಹಾಗೂ ಶಿಕಾರಿಪುರ ಹೊರವರ್ತುಲ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಡಲೇ ಸರ್ವೇಕಾರ್ಯ ಕೈಗೊಂಡು ನವೆಂಬರ್ 01ರೊಳಗಾಗಿ ಸರ್ವೇ ಕಾರ್ಯ ಪೂರ್ಣಗೊಳಿಸಿ, ವರದಿ ನೀಡುವಂತೆ ಹಾಗೂ ಈ ಸಂಬಂಧ ಜಿಲ್ಲೆಯ ಶಿವಮೊಗ್ಗ ಮತ್ತು ಸಾಗರ ಉಪವಿಭಾಗಾಧಿಕಾರಿಗಳು ಹಾಗೂ ಆಯಾ ತಾಲೂಕುಗಳ ತಹಶೀಲ್ದಾರರು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚಿಸಿದರು.


ಶಿವಮೊಗ್ಗ ನಗರದಲ್ಲಿ ಈಗಾಗಲೇ ಆರಂಭಿಸಲಾಗಿರುವ ವಿದ್ಯಾನಗರ–ಎಲ್.ಸಿ.46 ಮತ್ತು ಭದ್ರಾವತಿಯ ಕಡದಕಟ್ಟೆ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ನಿರೀಕ್ಷಿತ ಅವಧಿಯಲ್ಲಿ ಪೂರ್ಣಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈ ಕಾಮಗಾರಿಗಳು ಪೂರ್ಣಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದರಿಂದಾಗಿ ಲಘು ಮತ್ತು ಭಾರೀ ವಾಹನಗಳ ಸಂಚಾರಕ್ಕೆ ತೀವ್ರ ತರಹದ ಅಡ್ಡಿಯಾಗುತ್ತಿದೆ ಮಾತ್ರವಲ್ಲ ಭಾರೀ ಪ್ರಮಾಣದಲ್ಲಿ ಆಕಸ್ಮಿಕ ಅಪಘಾತಗಳು ಸಂಭವಿಸುತ್ತವೆ. ಇದರ ನಿಯಂತ್ರಣಕ್ಕೆ ಇರುವ ಪರಿಹಾರವೆಂದರೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಆದ್ದರಿಂದ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ ನವೆಂಬರ್ ಮಾಸಾಂತ್ಯದೊಳಗಾಗಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಸಭೆಯಲ್ಲಿ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು ಕಳಸವಳ್ಳಿಗೆ ಹೋಗಲು ಸೇತುವೆ ನಿರ್ಮಾಣ, ಸಾಗರ ಚತುಷ್ಪಥ ರಸ್ತೆ ಅಗಲೀಕರಣ, ತುಂಗಾನದಿ ಸೇತುವೆ ನಿರ್ಮಾಣ, ಬೆಕ್ಕೋಡಿ ಯೋಜನೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ-766ಸಿ ಬೈಂದೂರು-ನಾಗೋಡಿ ಸೆಕ್ಷನ್ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಮಂಜೂರಾಗಿ ಅನುಷ್ಟಾನದಲ್ಲಿರುವ ಅನೇಕ ಮಹತ್ವದ ಯೋಜನೆಗಳ ಕುರಿತು ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.


ಸಭೆಯಲ್ಲಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕೃಷ್ಣ, ಉಪವಿಭಾಗಾಧಿಕಾರಿಗಳಾದ ಸತ್ಯನಾರಾಯಣ, ಪಲ್ಲವಿ ಸಾತೇನಹಳ್ಳಿ, ಪೀರ್‍ ಪಾಶ ಸೇರಿದಂತೆ ರಾಷ್ಟೀಯ ಹೆದ್ದಾರಿ ವಿಭಾಗದ ಅಭಿಯಂತರರು, ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕಂದಾಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

8 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

12 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

14 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

14 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

22 hours ago