Categories: Shivamogga

Shivamogga | ದಸರಾ ಹಿನ್ನೆಲೆಯಲ್ಲಿ ನಗರದಾದ್ಯಂತ ಸಂಭ್ರಮ ಸಡಗರದ ವಾತಾವರಣ

ಶಿವಮೊಗ್ಗ : ಶಿವಮೊಗ್ಗ ದಸರಾ ಹಿನ್ನಲೆಯಲ್ಲಿ ನಗರದಾದ್ಯಂತ ಸಂಭ್ರಮ ಸಡಗರದ ವಾತಾವರಣ ಕಂಡುಬಂದಿದೆ.

ದಸರಾ ಹಬ್ಬದ ಅಂಗವಾಗಿ 9 ದಿನಗಳ ಕಾಲ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರೈತ ದಸರಾ, ಯುವ. ದಸರಾ, ರಂಗ ದಸರಾ, ಪರಿಸರ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಈಗ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಸಕಲ ಸಿದ್ಧತೆ ನಡೆದಿದೆ.

ನಗರದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದು, ಕೊನೆಯ ದಿನವಾದ ಅ.24ರಂದು ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ವೈಭವದ ಅಂಬಾರಿ ಮೆರವಣಿಗೆ ನಡೆಯಲಿದೆ. 

ದೇವಾನುದೇವತೆಗಳೊಂದಿಗೆ ಶಿವಪ್ಪ ನಾಯಕ ಅರಮನೆ ಆವರಣದಿಂದ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ 2.30ಕ್ಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಅಂಬಾರಿ ಮೆರವಣಿಗೆಯು ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ಹೊರಟು, ಎಸ್‌ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್, ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್ ವೃತ್ತ, ಲಕ್ಷ್ಮೀ ಟಾಕೀಸ್, ವಿನೋಬನಗರದ ಮಾರ್ಗವಾಗಿ ಫ್ರೀಡಂ ಪಾರ್ಕ್ ತಲುಪಲಿದೆ.

ಶ್ರೀ ಚಾಮುಂಡೇಶ್ವರಿ ದೇವಿ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆಯು ಫ್ರೀಡಂ ಪಾರ್ಕ್ ತಲುಪಿದ ಬಳಿಕ 6.30ಕ್ಕೆ ಅಂಬು ಛೇದನ ಮಾಡುವ ಮೂಲಕ ಮುಡಿಯುವ ಉತ್ಸವಕ್ಕೆ ತಹಸೀಲ್ದಾರ್ ಚಾಲನೆ ನೀಡಲಿದ್ದಾರೆ. ಬನ್ನಿ ಮುಡಿದ ಬಳಿಕ ಅತ್ಯಾಕರ್ಷಕ ಪಟಾಕಿಗಳನ್ನು ಸಿಡಿಸಲಿದ್ದು, ರಾವಣ ದಹನ ಕೂಡ ನಡೆಯಲಿದೆ.

ಚಾಮುಂಡೇಶ್ವರಿ ದೇವಿಯ ಜಂಬೂ ಸವಾರಿಯಲ್ಲಿ ಮಂಗಳವಾದ್ಯ, ಡೊಳ್ಳು ಕುಣಿತ, ಚಂಡೆ ಮದ್ದಳೆ, ತಟ್ಟೆರಾಯ, ಯಕ್ಷಗಾನ, ಕೀಲುಕುದುರೆ ನೃತ್ಯ, ನಗಿಸುವ ಗೊಂಬೆಗಳ ಕುಣಿತ, ವೀರಗಾಸೆ, ಕಥಕ್ಕಳಿ ನೃತ್ಯ ಸೇರಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. 

ಮೇಯರ್ ಎಸ್‌. ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ ಡಿಸಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿರುವರು.

ವಿದ್ಯುತ್ ದೀಪಾಲಂಕಾರ : 

ವಿಜಯದಶಮಿ ಹಿನ್ನೆಲೆಯಲ್ಲಿ ಮೂರು ದಿನಗಳಿಂದಲೇ ನಗರದಲ್ಲೆಡೆ ವಿದ್ಯುತ್ ದೀಪಗಳು ಝಗಮಗಿಸುತ್ತಿವೆ. ಬೆಕ್ಕಿನ ಕಲ್ಮಠದಿಂದ ಮೀನಾಕ್ಷಿ ಭವನ ರಸ್ತೆ, ಕರ್ನಾಟಕ ಸಂಘ, ಅಮೀರ್ ಅಹಮ್ಮದ್ ವೃತ್ತ, ಅಶೋಕ ವೃತ್ತದವರೆಗೆ, ನೆಹರು ರಸ್ತೆಯಿಂದ ಸೀನಪ್ಪ ಶೆಟ್ಟಿ ವೃತ್ತ, ಡಾ. ಬಿ.ಆರ್.ಅಂಬೇಡ್ಕರ್ ಮಾರ್ಗವಾಗಿ ಪೊಲೀಸ್ ಫ್ರೀಡಂ ಪಾರ್ಕ್‌ವರೆಗೆ, ಚೌಕಿಯಿಂದ ಉಷಾ ನರ್ಸಿಂಗ್ ಹೋಂವರೆಗೆ, ಬೆಕ್ಕಿನ ಕಲ್ಮಠದಿಂದ ಆಂಜನೇಯ ದೇವಸ್ಥಾನ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್ ಮುಖ್ಯರಸ್ತೆ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಶಿವಮೂರ್ತಿ ವೃತ್ತದಿಂದ ಮಹಾವೀರ ವೃತ್ತ, ಗಾಂಧಿ ಪಾರ್ಕ್‌ವರೆಗೆ ಹಾಗೂ ಕೋಟೆ ಆಂಜನೇಯಸ್ವಾಮಿ ಹರಕೆರೆ ಕಾಳಿಕಾಂಬಾ ದೇವಸ್ಥಾನವರೆಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

ಆನೆಗಳಿಗೆ ತಾಲೀಮು :

ದಸರಾ ಅಂಬಾರಿ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರದಿಂದ ನೇತ್ರಾವತಿ ಮತ್ತು ಹೇಮಾವತಿ ಆನೆ ನಗರಕ್ಕೆ ಬಂದಿಳಿದಿವೆ. ವೈದ್ಯಕೀಯ ತಪಾಸಣೆ ಬಳಿಕ, ಆನೆಗಳಿಗೆ ಮೆರವಣಿಗೆಯ ತಾಲೀಮು ನಡೆಸಲಾಯಿತು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago