Categories: Shivamogga

Shivamogga | ಮತ ಎಣಿಕೆ ; ಮಾರ್ಗ ಬದಲಾವಣೆ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023ರ ಸಂಬಂಧ ದಿನಾಂಕ: 13-05-2023 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ದಿನಾಂಕ: 13-05-2023 ರಂದು ವಾಹನಗಳ ಸಂಚಾರಕ್ಕೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

  • ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.
  • ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ನ ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.
  • ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‌ಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‌ಗಳು ಬಿ.ಹೆಚ್ ರಸ್ತೆ ಮಾರ್ಗವಾಗಿ ಬಸ್ಟ್ಯಾಂಡ್ ಗೆ ಹೋಗುವುದು.
  • ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನಗಳು, ಎಲ್ಲಾ ಬಸ್‌ಗಳನ್ನು ವಿನೋಬನಗರ 100 ಅಡಿ ರಸ್ತೆ ಮಾರ್ಗವಾಗಿಹೋಗುವುದು.
  • ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
  • ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಭದ್ರಾವತಿ ಎನ್.ಆರ್ ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
  • ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾರ್ವಜನಿಕರ ಎಲ್ಲಾ ತರದ ವಾಹನಗಳನ್ನು ಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡುವುದು.

ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮತ ಎಣಿಕಾ ಕೇಂದ್ರಕ್ಕೆ ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು ಮೊಬೈಲ್ ಫೋನ್, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿರುವುದಿಲ್ಲ.

Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

2 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

5 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

9 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

21 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 day ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 day ago