ಶಿವಮೊಗ್ಗ: ನಾಡಹಬ್ಬ ದಸರಾ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಅತ್ಯಂತ ವಿಜೃಂಭಣೆಯಿಂದ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳನ್ನು ಹಮ್ಮಿಕೊಂಡಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಮೇಯರ್ ಶಿವಕುಮಾರ್ ಹೇಳಿದ್ದಾರೆ.
ಅವರು ಸೋಮವಾರ ನಗರದ ಎಸ್. ನಿಜಲಿಂಗಪ್ಪ ಸಭಾಂಗಣದಲ್ಲಿ ಮಹಿಳಾ ದಸರಾ 2023 ಇದರ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಮಹಾನಗರ ಪಾಲಿಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ನೀಡುತ್ತಾ ಬಂದಿದೆ. ಈ ಬಾರಿಯೂ ಕೂಡ ಹಲವಾರು ಸ್ಪರ್ಧೆ ಏರ್ಪಡಿಸಿದ್ದೇವೆ. ರಂಗೋಲಿ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಮಹಿಳಾ ದಸರಾ ಅಧ್ಯಕ್ಷರಾದ ಸಂಗೀತಾ ನಾಗರಾಜ್, ವಿರೋಧ ಪಕ್ಷದ ನಾಯಕಿ ಮೇಹಕ್ ಷರೀಫ್, ಪಾಲಿಕೆ ಸದಸ್ಯರಾದ ಸುವರ್ಣಾಶಂಕರ್, ಸುನೀತಾ ಅಣ್ಣಪ್ಪ, ಆರತಿ ಆ.ಮ. ಪ್ರಕಾಶ್, ರಾಜು, ಧೀರರಾಜ್ ಹೊನ್ನವಿಲೆ, ಅನಿತಾ ರವಿಶಂಕರ್, ಇ. ವಿಶ್ವಾಸ್, ಮಂಜುಳಾ ಶಿವಣ್ಣ, ಕಲ್ಪನಾ ರಮೇಶ್, ಮಂಜುನಾಥ್, ವಿಶ್ವನಾಥ್, ಭಾನುಮತಿ ವಿನೋದ್ ಶೇಟ್, ಅನುಪಮಾ ಮತ್ತಿತರರಿದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…