Shivamogga | ಮುತಾಲಿಕ್ ಅವರನ್ನು ಪೊಲೀಸರು ನಗರ ಪ್ರವೇಶ ಮಾಡದಂತೆ ತಡೆದಿರುವುಕ್ಕೆ ಖಂಡನೆ

ಶಿವಮೊಗ್ಗ: ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಪೊಲೀಸರು ನಗರ ಪ್ರವೇಶ ಮಾಡದಂತೆ ತಡೆದಿರುವುದನ್ನು ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ತೀವ್ರವಾಗಿ ಖಂಡಿಸಿದರು.


ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಿಂದೂಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಮುತಾಲಿಕ್ ಅವರು ಇಂದು ರಾಗಿಗುಡ್ಡಕ್ಕೆ ಭೇಟಿ ನೀಡಲಿದ್ದರು. ನೊಂದ ಹಿಂದೂಗಳಿಗೆ ಸಾಂತ್ವನ ಹೇಳಬೇಕಿತ್ತು. ಆದರೆ ಶಿವಮೊಗ್ಗ ಪೊಲೀಸರು ರಾತ್ರಿ ಎರಡು ಗಂಟೆಗೆಯೇ ಬಸ್ಸಿನಲ್ಲಿ ಬರುತ್ತಿರುವಾಗ ಬಸ್ಸನ್ನೇ ತಡೆದು ಅವರಿಗೆ 30 ದಿನದ ವರೆಗೆ ಗಡಿಪಾರು ಮಾಡಿ ದಾವಣಗೆರೆಗೆ ಕರೆದುಕೊಂಡು ಹೋಗಿರುವುದನ್ನು ಶ್ರೀರಾಮ ಸೇನೆ ಬಲವಾಗಿ ಖಂಡಿಸುತ್ತದೆ ಎಂದರು.


ಮುತಾಲಿಕ್ ಅವರು ಇಲ್ಲೇನು ಪ್ರತಿಭಟನೆಗೆ ಬಂದವರಲ್ಲ. ಹೋರಾಟವನ್ನು ಮಾಡುತ್ತಿರಲಿಲ್ಲ. ಹಿಂದೂಗಳಿಗಾದ ಅನ್ಯಾಯಕ್ಕೆ ಸಾಂತ್ವನ ಹೇಳಲೂಬಾರದು ಎಂದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ. ಕಾಂಗ್ರೆಸ್ ಸರ್ಕಾರ ಹಕ್ಕುಗಳನ್ನು ಧಮನ ಮಾಡಲು ಹೊರಟಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ರಾಗಿಗುಡ್ಡ ಘಟನೆ ಪೂರ್ವನಿಯೋಜಿತವಾದುದು. ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳ ಮೇಲೆಯೇ ಹಲ್ಲೆ ಮಾಡಲು ಹೊರಟಾಗ ಅವರಿಗೆ ಅದೇಕೆ ತಮ್ಮ ಸೊಂಟದ ಬೆಲ್ಟ್ ನಲ್ಲಿದ್ದ ಪಿಸ್ತೂಲ್ ನೆನಪಾಗಲಿಲ್ಲವೋ ಗೊತ್ತಿಲ್ಲ ಎಂದರು.


ಶಿವಮೊಗ್ಗದ ಪೊಲೀಸರಿಗೆ ಮುತಾಲಿಕ್ ಎಷ್ಟು ಹೊತ್ತಿಗೆ ಬರುತ್ತಾರೆ ಎಂಬ ಮಾಹಿತಿ ಗೊತ್ತಿರುತ್ತದೆ. ಆದರೆ ಗಲಭೆಯಲ್ಲಿ ಹಿಂದೂಗಳ ಮೇಲೆ ಕಲ್ಲೆಸೆದವರು ಯಾರು, ತಳವಾರು ಹಿಡಿದು ಝಳಪಿಸಿದವರು ಯಾರು, ಯಾವ ಭಯೋತ್ಪಾದಕರು ಶಿವಮೊಗ್ಗದಲ್ಲಿದ್ದಾರೆ ಈ ಮಾಹಿತಿಗಳು ಸಿಗುವುದಿಲ್ಲವೇ ಎಂದು ಪ್ರಶ್ನಿಸಿದರು.


ಈ ಎಲ್ಲಾ ಘಟನೆಗಳನ್ನು ಇಟ್ಟುಕೊಂಡು ಹಿಂದೂಗಳ ಮೇಲೆ ಆಗುತ್ತಿರುವ ಅನ್ಯಾಯ, ಅತ್ಯಾಚಾರಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಬರುವ ದಿನಗಳಲ್ಲಿ ಶಿವಮೊಗ್ಗ ಚಲೋ ಚಳುವಳಿಯನ್ನು ಶ್ರೀರಾಮ ಸೇನೆ ಹಮ್ಮಿಕೊಂಡಿದೆ. ಇದಕ್ಕೆ ರಾಜ್ಯಾದ್ಯಂತದ ಹಿಂದೂ ರಾಷ್ಟ್ರಭಕ್ತರು ಲಕ್ಷ ಸಂಖ್ಯೆಯಲ್ಲಿ ಬರುತ್ತಾರೆ. ಹರ್ಷನ ಕೊಲಡ ಮಾಡಿದವರು ರಾಗಿಗುಡ್ಡದಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲು ಎಸೆದವರು, ಖಡ್ಗವನ್ನು ಪ್ರದರ್ಶಿಸಿದವರು ತಾಕತ್ತು ದಮ್ಮು ಇದ್ದರೆ ಆ ಪುಂಡ ಪೋಕರಿಗಳೆಲ್ಲ ಬರಲಿ ಎಂದು ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಶಶಿ ಇನ್ನಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

17 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

24 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago