Shivamogga | ಯಾವುದೇ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ; ಎಸ್‌ಪಿ

ಶಿವಮೊಗ್ಗ : ಅಕ್ಟೋಬರ್ 01 ರಂದು ರಾತ್ರಿ ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಒಬ್ಬ ಮುಸ್ಲಿಂ ಯುವಕನ ಮೃತ್ಯುವಾಗಿದೆ ಎಂದು ಸುಳ್ಳು ಸುದ್ಧಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಮತ್ತು ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವವರ ವಿರುದ್ಧ ಎಫ್.ಐ.ಆರ್. ದಾಖಲಾಗಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಗಲಭೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಗಾಯಗೊಂಡವರನ್ನು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿಸಿದ್ದು, ಒಟ್ಟು 12 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಸುಳ್ಳುಸುದ್ದಿಗೆ ಕಿವಿಗೊಡಬೇಡಿ ಎಂದು ಅವರು ವಿನಂತಿಸಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದ್ದಂತೆ 60ಕ್ಕೂ ಜನರನ್ನು ಬಂಧಿಸಲಾಗಿದೆ ಮತ್ತು ಕೆಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನ ಸ್ಥಳಗಳಲ್ಲಿ ಎರಡು ಓಮ್ನಿ ಕಾರುಗಳು ಕಂಡುಬಂದಿದ್ದು, ಹೊರಗಿನವರು ಆ ವಾಹನದಲ್ಲಿ ಬಂದು ದಾಂಧಲೆ ಎಬ್ಬಿಸಿದ್ದಾರೆ ಎಂಬ ಪುಕಾರ್ ಹಬ್ಬಿದ್ದು, ಅದು ಕೂಡ ಸುಳ್ಳಾಗಿದ್ದು, ಆ ವಾಹನದಲ್ಲಿ ನ್ಯಾಮತಿಯಿಂದ ಅವರು ಈದ್‌ಮಿಲಾದ್ ಹಬ್ಬಕ್ಕೆ ಬಂದು ಮೆರವಣಿಗೆಯ ಬಳಿಕ ಶಾಂತಿನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಗಲಭೆಯ ಹಿನ್ನಲೆಯಲ್ಲಿ ಅವರು ವಾಪಾಸ್ಸು ತೆರಳಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರು ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಕೇಳಿ ಬರುತ್ತಿರುವ ಆರೋಪಗಳು ಸತ್ಯದೂರವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago