Categories: Shivamogga

Shivamogga | ಹೊಸ ವರ್ಷಾಚರಣೆಗೆ ಇಲ್ಲಿವೆ ನಿಬಂಧನೆಗಳು

ಶಿವಮೊಗ್ಗ : ಮುಂಬರುವ ಹೊಸ ವರ್ಷ (New Year) ಆಚರಣೆಯ ಸಂಬಂಧ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಇಂದು ಸಂಜೆ ಶಿವಮೊಗ್ಗ ಎಸ್‌ಪಿ (Shivamogga SP) ಮಿಥುನ್ ಕುಮಾರ್ ಜಿ.ಕೆ ರವರ ನೇತೃತ್ವದಲ್ಲಿ, ಶಿವಮೊಗ್ಗ ನಗರದ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದರು.

  • ಹೊಸ ವರ್ಷ ಆಚರಣೆ ಸಮಾರಂಭವನ್ನು ಆದಷ್ಟೂ ಶಿಸ್ತಿನಿಂದ, ಮಿತಿಯ ಒಳಗೆ ಆಚರಿಸಿ, ಮಿತಿಯನ್ನು ಮೀರಿದ್ದಲ್ಲಿ ಅಪಘಾತಗಳು ನಡೆಯುವ ಸಂಭವವಿರುತ್ತದೆ ಮತ್ತು ಸಂಭ್ರಮಾಚರಣೆಯನ್ನು ಬೆಳಗಿನಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.
  • ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ಮದ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮದ್ಯಪಾನ ಮಾಡದೇ ಇರುವವರು ಮಾತ್ರ ವಾಹನ ಚಾಲನೆ ಮಾಡುವುದು ಸೂಕ್ತವಿರುತ್ತದೆ.
  • ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಹೊರಾಂಗಣದ ಸಂಭ್ರಮಾಚರಣೆಗಳಲ್ಲಿ ರಾತ್ರಿ 10 ಗಂಟೆಯ ವರೆಗೆ ನಿಗದಿಪಡಿಸಿದ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂ ಗಳನ್ನು ಬಳಸುವುದು ಮತ್ತು ರಾತ್ರಿ 10 ಗಂಟೆಯ ನಂತರ ಕೇವಲ ಒಳಾಂಗಣ ಸಂಭ್ರಮಾಚರಣೆಗಳಲ್ಲಿ ಮಾತ್ರ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂಗಳನ್ನು ಬಳಸುವುದು.
  • ಹೊಸ ವರ್ಷ ಆಚರಣೆ ಸಮಾರಂಭದ ಆಯೋಜಕರು, ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರುವುದು, ಕಾನೂನುನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಭ್ಯಂತರವಿರುದಿಲ್ಲ ಮತ್ತು ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.
  • ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವವರ ಸುರಕ್ಷತೆಯ ದೃಷ್ಠಿಯಿಂದ, ಅಪಾಯವಿರುವ ಸ್ಥಳಗಳಾದ ಮೇಲಂತಸ್ತು (ಟಾಪ್ ರೂಫ್) ಗಳಲ್ಲಿ ಮತ್ತು ಎತ್ತರವಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡವುದು ಸೂಕ್ತವಿರುವುದಿಲ್ಲ. ಆದ್ದರಿಂದ ಎಲ್ಲಾ ಸುರಕ್ಷತಾ ನಿಯಮಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಸುರಕ್ಷಿತವಾದ ಸ್ಥಳಗಳಲ್ಲಿಯೇ ಕಾರ್ಯಕ್ರಮವನ್ನು ಆಯೋಜನೆ ಮಾಡುವುದು.
  • ಸಾರ್ವಜನಿಕರ ಹಿತ ದೃಷ್ಠಿಯಿಂದ, ಸಂಭ್ರಮಾಚರಣೆಯನ್ನು ಕಾರ್ಯಕ್ರಮ ಆಯೋಜಿಸಿರುವ ಸ್ಥಳದ ಹೊರಗಡೆ, ರಸ್ತೆ ಬದಿಗಳಲ್ಲಿ ಮಾಡದೇ, ನಿಗದಿಪಡಿಸಿರುವ ಸ್ಥಳದ ಒಳಗಡೆಯೇ ಮಾಡುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರ ಜವಬ್ದಾರಿಯಾಗಿರುತ್ತದೆ.
  • ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ, ಬಾಲರಾಜ್ ಡಿವೈಎಸ್ಪಿ, ಶಿವಮೊಗ್ಗ ಎ ಉಪ ವಿಭಾಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

5 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

6 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

18 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

19 hours ago