Categories: Shivamogga

Shivamogga | Congress | BJP | 11 ಜನರನ್ನು ಬಿಟ್ಟು 12ನೇ ಯವರಿಗೆ ಟಿಕೆಟ್ ನೀಡಿದ್ರೂ ಕೂಡ ನಾವು ಪಕ್ಷನಿಷ್ಠೆಯಿಂದ ಕೆಲಸ ಮಾಡ್ತೇವೆ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನ ಕುಮಾರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವುದಾದರೆ ಯಾರು ಬೇಕಾದರೂ ಬರಬಹುದು. ಅದಕ್ಕೆ ನಮ್ಮೆಲ್ಲರ ಸ್ವಾಗತವಿದೆ. ಆಯನೂರು ಮಂಜುನಾಥ್ ಅವರೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಬಿಡುವುದು ಹೈಕಮಾಂಡಿಗೆ ಬಿಟ್ಟದ್ದು, ಹೈಕಮಾಂಡ್ ಅರ್ಜಿ ಸಲ್ಲಿಸಿದ ಹನ್ನೊಂದು ಜನರನ್ನು ಬಿಟ್ಟು ಹನ್ನೆರಡನೆಯವರಿಗೆ ಟಿಕೆಟ್ ನೀಡಿದರೂ ಕೂಡ ನಾವು ಪಕ್ಷನಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಖ್ಯವಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿರುವ ಆಯನೂರು ಮಂಜುನಾಥ್ ಅವರು ಶಿವಮೊಗ್ಗದಲ್ಲಿ ಶಾಂತಿ- ಸೌಹಾರ್ದತೆಯನ್ನು ಬಯಸಿದ್ದಾರೆ. ಕೆ.ಎಸ್.ಈಶ್ವರಪ್ಪನವರು ಅಶಾಂತಿ ಕೋಮುಗಲಭೆ ಸೃಷ್ಟಿಸಿಯೇ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಪಕ್ಷದವರೇ ಆದ ಆಯನೂರು ಮಂಜುನಾಥ್ ಅವರು ಈಶ್ವರಪ್ಪನವರ ಸ್ವಭಾವ ನಡೆಯನ್ನು ಗಮನಿಸಿಯೇ ಮುಂದಿನ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಗಲಾಟೆ, ಗೊಂದಲ ಆಗಬಹುದು. ಮಸೀದಿ ಮಂದಿರಗಳು ಮಲಿನ ವಾಗಬಹುದು ಎಂಬ ದಟ್ಟ ಸೂಚನೆ ಕೊಟ್ಟಿದ್ದಾರೆ. ಇವರ ಈ ಹೇಳಿಕೆಯನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಚುನಾವಣಾ ಅಧಿಕಾರಿಗಳು ಗಂಭೀರವಾಗಿ ಗಮನಿಸುವ ಮೂಲಕ ಎಚ್ಚರ ವಹಿಸಬೇಕಾಗಿದೆ. ರಾಜ್ಯ ಚುನಾವಣಾ ಅಧಿಕಾರಿಗಳು ಕೂಡ ಶಿವಮೊಗ್ಗದ ಮೇಲೆ ಹದ್ದಿನಕಣ್ಣು ಇಡಬೇಕಾಗಿದೆ ಎಂದು ಮನವಿ ಮಾಡಿದರು.


ಇದರ ಜೊತೆಗೆ ಶಿವಮೊಗ್ಗದಲ್ಲಿ ಈಗಾಗಲೇ ಹಣದ ಹೊಳೆ ಹರಿಯುತ್ತಿದೆ. ಕೋಟ್ಯಂತರ ರೂ. ಬೆಲೆ ಬಾಳುವ ಸೀರೆಗಳು ಸಿಕ್ಕಿವೆ. ನಗದು ಸಿಕ್ಕಿದೆ. ವಾರ್ಡ್‌ಗಳಲ್ಲಿ ಹಣವನ್ನು ಈಗಾಗಲೇ ಸಂಗ್ರಹಿಸಿ ಇಡಲಾಗಿದೆ ಎಂಬ ಮಾಹಿತಿಯ ಬಗ್ಗೆ ಸುಳಿವನ್ನು ಕೂಡ ಆಯನೂರು ಮಂಜುನಾಥ್ ಅವರು ನೀಡಿದ್ದಾರೆ. ಈ ವಿಷಯವನ್ನು ಕೂಡ ಚುನಾವಣಾ ಅಧಿಕಾರಿಗಳ ಗಮನಿಸಬೇಕು ಎಂದು ಸಲಹೆ ನೀಡಿದರು.


ಶಿವಮೊಗ್ಗದಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ ಎನ್ನುವುದು ನಿಜ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲಿ ನಡೆದ ಅಭಿವೃದ್ಧಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಂದುವರಿಸಿದ್ದು ನಿಜ. ಅಂತಹ ಯಡಿಯೂರಪ್ಪನವರನ್ನ ಶಾಸಕರಾಗಿದ್ದ ಕೆ.ಎಸ್. ಈಶ್ವರಪ್ಪ ಕಡೆಗಣಿಸಿದ್ದು ಕೂಡ ಅಷ್ಟೇ ಸತ್ಯ. ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಕೊನೆಗೂ ತಮ್ಮ ಪಕ್ಷದವರೇ ಆದ ಹಿಂದೂ ಹುಲಿ, ಫ್ರೈರ್ ಬ್ರಾಂಡ್ ಎಂದೆಲ್ಲಾ ಬಿರುದಾಂಕಿತರಾದ ಸನ್ಮಾನ್ಯ ಕೆ.ಎಸ್. ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದರು.

ಈ ಎಲ್ಲದರ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಶಿವಮೊಗ್ಗದಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಕೂಡ ನಾವು ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ, ಆಯನೂರು ಬಂದರೂ ಸ್ವಾಗತ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶ್ಯಾಂಸುಂದರ್, ಕರಿಬಸಪ್ಪ, ದಯಾನಂದ್, ಲೋಹಿತ್ ಕುಮಾರ್, ಅಭಿಷೇಕ್ ಸೇರಿದಂತೆ ಹಲವರು ಇದ್ದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

7 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

17 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

23 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago