ಶಿವಮೊಗ್ಗ: ಇಲ್ಲಿನ ಮಿಳಘಟ್ಟದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.