Thirthahalli | ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ ! ಇನ್ನೋರ್ವನ ಸ್ಥಿತಿ ಗಂಭೀರ

0 2,591

ತೀರ್ಥಹಳ್ಳಿ: ಮನೆಗೆ ಬೆಂಕಿ ತಗಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ನಡೆದಿದೆ.

ತೀರ್ಥಹಳ್ಳಿ – ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ  ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. 

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟತೆ ನೀಡಬೇಕಿದೆ.

ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.

error: Content is protected !!