ತೀರ್ಥಹಳ್ಳಿ: ಮನೆಗೆ ಬೆಂಕಿ ತಗಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ನಡೆದಿದೆ.
ತೀರ್ಥಹಳ್ಳಿ – ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟತೆ ನೀಡಬೇಕಿದೆ.
ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…