ಸೊರಬ : ಚಂದ್ರಗುತ್ತಿ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ದ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು.
ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ ಎಲ್ ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಜಾತ್ರೆಯಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,56,210 ರೂ. ಕಾಣಿಕೆ ಸಂಗ್ರಹವಾಗಿದ್ದು. ಕಳೆದ ಫೆಬ್ರವರಿ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 22,67,710 ರೂ ಕಾಣಿಕೆ ಸಂಗ್ರಹವಾಗಿತ್ತು. ಕೇವಲ ಎರಡು ತಿಂಗಳಿನಲ್ಲಿ ದೇವಸ್ಥಾನದ ಗರಿಷ್ಠ ಮೊತ್ತದ ಕಾಣಿಕೆ ಹಣ 41,23,920, ರೂ. ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ ಸಿ ಕ್ಯಾಮೆರಾ ಅಳವಡಿಸಲಾಗಿತ್ತು.
“ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಬೇಕಾಗುವ ಮೂಲ ಸೌಕರ್ಯಗಳು ಒದಗಿಸುವಲ್ಲಿ ಸರ್ಕಾರವು ಮುಂದಾಗುತ್ತಿಲ್ಲ ಎಂಬುವುದು ರೇಣುಕಾಂಬ ದೇವಿಯ ಭಕ್ತರ ಪ್ರಶ್ನೆಯಾಗಿದೆ.”
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು,ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.