ತಂದೆ ಪರ ಚುನಾವಣಾ ಪ್ರಚಾರ ಅಖಾಡಕ್ಕಿಳಿದ ಕುಮಾರ್ ಬಂಗಾರಪ್ಪ ಪುತ್ರಿ

0 2

ಸೊರಬ : ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಎಸ್. ಕುಮಾರ್ ಬಂಗಾರಪ್ಪ ಪರವಾಗಿ ಅವರ ಪುತ್ರಿ ಲಾವಣ್ಯ ಅವರು ತಾಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ತಮ್ಮ ತಂದೆ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಲಾವಣ್ಯ ಕುಮಾರ್ ಬಂಗಾರಪ್ಪ ಅವರು, ತಮ್ಮ ತಂದೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮತ್ತಷ್ಟು ಅಭಿವೃದ್ಧಿ ಮಾಡುವ ಮೂಲಕ ಸೊರಬ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ಹೊಂದಿದ್ದಾರೆ. ಇದಕ್ಕೆ ಕ್ಷೇತ್ರದ ಜನತೆ ಬಿಜೆಪಿಗೆ ಬೆಂಬಲ ನೀಡಬೇಕು ಎಂದರು.

ತಮ್ಮ ವೈಯುಕ್ತಿಕವಾಗಿ ಸಭೆ ಸಮಾರಂಭಗಳಿಗೂ ಗಮನ ನೀಡದೇ ಸದಾ ಸೊರಬ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅಭಿವೃದ್ಧಿಯನ್ನು ಮುಂದಿಟ್ಟು ಮತಯಾಚನೆ ಮಾಡುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡ ವೇಳೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡುತ್ತಿದ್ದಾರೆ. ಈ ಬಾರಿ ತಂದೆ ಕುಮಾರ್ ಬಂಗಾರಪ್ಪ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave A Reply

Your email address will not be published.

error: Content is protected !!