ಸೊರಬ: ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪದಲ್ಲಿ ದುರಸ್ತಿಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಭಾರತೀ ಶೆಟ್ಟಿ ಅವರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಕೆಲ ದಿನಗಳ ಹಿಂದೆ ತಾಂತ್ರಿಕ ಸಮಸ್ಯೆಯಿಂದ ಸಾರ್ವಜನಿಕರ ಬಳಕೆಯಿಂದ ದೂರು ಉಳಿಯುವಂತಾಗಿತ್ತು. ಸಾರ್ವಜನಿಕರು ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಮಳಿಗೆಯವರು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪುರಸಭೆ ವತಿಯಿಂದ ದುರಸ್ತಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅನ್ಸರ್ ಆಹ್ಮದ್, ಆಫ್ರೀನಾ, ಜಯಲಕ್ಷ್ಮಿ, ಪ್ರೇಮಾ, ಪ್ರಮುಖರಾದ ಎಂ.ಕೆ. ಯೋಗೇಶ್, ಪರಮೇಶಪ್ಪ, ಟೋಕಪ್ಪ ಮಂಚಿ ಸೇರಿದಂತೆ ಇತರರಿದ್ದರು.