ಮನೆಯಿಂದಲೇ ಓಟಿಂಗ್ ಆರಂಭ ; ಹೇಗಿರುತ್ತೆ ಮತದಾನ ಪ್ರಕ್ರಿಯೆ ?

0 0

ಸೊರಬ: ವಿಧಾನಸಭಾ ಚುನಾವಣಾ ಹಿನ್ನೆಲೆ ಮನೆಯಿಂದಲೇ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಈ ಬಾರಿಯ ಚುನಾವಣೆಗೆ ಪಟ್ಟಣದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್ ಗೋಖಲೆ ಮೊದಲು ಮತ ಚಲಾಯಿಸಿದ್ದಾರೆ.


ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಹೊಸ ಪರಿಕಲ್ಪನೆ ಕಂಡುಕೊಂಡಿದೆ.

ಈ ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು 82 ಮಂದಿ ಅಂಗವಿಕಲರು ಸೇರಿದಂತೆ ಒಟ್ಟು 244 ಮಂದಿ ಮತದಾನ ಮಾಡಲಿದ್ದಾರೆ.

ಮನೆಯಲ್ಲಿಯೇ ಮತಗಟ್ಟೆ ಸ್ಥಾಪಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಂದನೇ ಮತಗಟ್ಟೆ ಅಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ, ಒಬ್ಬರು ಮೈಕ್ರೋ ಅಬ್ಸರ್ವರ್, ಒಬ್ಬರು ಕ್ಯಾಮರಾಮನ್ ಹಾಗೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಸ್ಥಳೀಯವಾಗಿ ಬಿಎಲ್ ಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದರು.

Leave A Reply

Your email address will not be published.

error: Content is protected !!