ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸಹೋದರರಿಬ್ಬರು ಸ್ಥಳದಲ್ಲೇ ಸಾವು !

0 70

ಸೊರಬ : ತಾಲೂಕಿನ ಉಳವಿ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಸುಹೇಲ್ (27) ಮತ್ತು ಸಯ್ಯದ್ ಆಫ್ರಿದ್ ಅಲಿಯಾಸ್ ಪಿಂಟು (21) ಎಂದು ಗುರುತಿಸಲಾಗಿದೆ.

ಸಾಗರದ ರಾಮನಗರದ ನಿವಾಸಿಗಳಾದ ಇಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಮದುವೆಗೆಂದು ಉಳವಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ಇಬ್ಬರು ಸವಾರರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ಇಬ್ಬರ ಮೃತದೇಹವನ್ನು ರವಾನೆ ಮಾಡಲಾಗಿದೆ.

Leave A Reply

Your email address will not be published.

error: Content is protected !!