ಗ್ರಾಮೀಣ ವಿದ್ಯಾರ್ಥಿನಿಯ ಸಾಧನೆ ; ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.5 ಅಂಕ

0 63

ಸೊರಬ: 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕಾರಿಪುರ ತಾಲ್ಲೂಕಿನ ಹೊಸೂರು ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಂದ್ರಗುತ್ತಿ ಗ್ರಾಮದ ವಿದ್ಯಾರ್ಥಿನಿ ಮಮತಾ ಪಿ.ವಿಜ್ಞಾನ ವಿಭಾಗದಲ್ಲಿ ಶೇ. 94.5 ರಷ್ಟು ಅಂಕಗಳನ್ನು ಪಡೆದಿದ್ದಾರೆ.


ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಪಿ. ಮಮತಾ ತನ್ನ ಸ್ವಂತ ಶ್ರಮದಿಂದ 94.5% ರಷ್ಟು ಅಂಕ ಗಳಿಸಿದ್ದು, ಚಂದ್ರಗುತ್ತಿ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸದ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

Leave A Reply

Your email address will not be published.

error: Content is protected !!