ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ನಿರೀಕ್ಷಾಗೆ ಪ್ರಥಮ ಸ್ಥಾನ

0 37

ಸೊರಬ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಉತ್ತರ ಕರ್ನಾಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಾರವಾರ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ ಪ್ರಾಥಮಿಕ ಶಾಲಾ ವಿಭಾಗ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಚಂದ್ರಗುತ್ತಿ ಗ್ರಾಮದ ವಿದ್ಯಾರ್ಥಿನಿ ನಿರೀಕ್ಷಾ ಪ್ರಥಮ ಸ್ಥಾನ ಪಡೆದು 10 ಸಾವಿರ ರೂ. ಬಹುಮಾನ ಗಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಕಾರವಾರದ ಶಾಸಕ ಸತೀಶ್ ಸೈಲ್ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.

ಚಂದ್ರಗುತ್ತಿ ಗ್ರಾಮದ ಗ್ರಾಪಂ ಸದಸ್ಯ ಚಂದ್ರಕಾಂತ್ ದಂಪತಿ ಅವರ ಪುತ್ರಿ ನಿರೀಕ್ಷಾ ಸಿದ್ದಾಪುರ ತಾಲೂಕಿನ ಲಿಟಲ್ ಫ್ಲವರ್ ಶಾಲೆಯಲ್ಲಿ 6ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೂಕು ಮಟ್ಟದಲ್ಲೂ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲಾ ಮಟ್ಟದಲ್ಲೂ ಕೂಡ ಪ್ರಥಮ ಸ್ಥಾನ ಗಳಿಸಿದ್ದು ಚಂದ್ರಗುತ್ತಿ ಗ್ರಾಮಸ್ಥರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

“ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಯಾವುದೇ ರೀತಿಯ ತರಬೇತಿ ಇಲ್ಲದೆ ತನ್ನ ಬುದ್ಧಿ ಶಕ್ತಿಯಿಂದ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ ಚಂದ್ರಗುತ್ತಿ ಗ್ರಾಮದ ನಿರೀಕ್ಷಾ ಕಾರವಾರ ಜಿಲ್ಲಾ ಮಟ್ಟದಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಶ್ಲಾಘನೀಯ.”
– ಎಂ.ಬಿ ರೇಣುಕಾ ಪ್ರಸಾದ್, ಗ್ರಾ.ಪಂ ಉಪಾಧ್ಯಕ್ಷ ಚಂದ್ರಗುತ್ತಿ

Leave A Reply

Your email address will not be published.

error: Content is protected !!