Categories: Soraba

ನನಗೆ ರಾಜಕೀಯ ಗೊತ್ತಿಲ್ಲ ಹೀಗಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿಲ್ಲ ; ಶಿವಣ್ಣ

ಸೊರಬ: ‘ಪತ್ನಿ ಗೀತಾ ಮಾತ್ರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನನಗೆ ರಾಜಕೀಯ ಗೊತ್ತಿಲ್ಲ. ಹೀಗಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿಲ್ಲ. ಒಳ್ಳೆಯ ಕೆಲಸ ಮಾಡುವವರು ಎಲ್ಲ ಪಕ್ಷದಲ್ಲೂ ನನ್ನ ಗೆಳೆಯರಿದ್ದಾರೆ. ಅವರ ಪರ ಕಾಳಜಿಯಿಂದ ಮಾತ್ರ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದ್ದೇನೆ’ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.

ಆನವಟ್ಟಿ ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿರಂತರವಾಗಿ ಚಿತ್ರೀಕರಣ ಇರುವುದರಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳಲು ಅವಕಾಶ ಸಿಗುವುದಿಲ್ಲ. ಕೇವಲ ಪ್ರಚಾರದಲ್ಲಿ ತೊಡಗಿಕೊಳ್ಳಲು ಮಾತ್ರ ಸೀಮಿತಗೊಂಡಿರುವೆ’ ಎಂದರು.

‘ಬಾಮೈದ ಮಧು ಬಂಗಾರಪ್ಪ, ಆತ್ಮೀಯರಾದ ಸಿದ್ದರಾಮಯ್ಯ, ಶಿರಸಿಯ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯಕ್, ಜಗದೀಶ್ ಶೆಟ್ಟರ್, ವಿಜಯ್‌ಸಿಂಗ್, ಅಶೋಕ ಖೇಣಿ ಪರವೂ ಪ್ರಚಾರಕ್ಕೆ ತೆರಳುವೆ’ ಎಂದರು.

‘ಜಗದೀಶ ಶೆಟ್ಟರ್ ಅಪ್ಪಾಜಿಯ ದೊಡ್ಡ ಅಭಿಮಾನಿ. ಅವರ ಕುಟುಂಬದವರು ನನ್ನನ್ನು ಹಾಗೂ ಅಪ್ಪುವನ್ನು ಬಹಳ ಗೌರವಿಸುತ್ತಿದ್ದರು. ಶೆಟ್ಟರ್‌ ಯಾವುದೇ ಪಕ್ಷದಲ್ಲಿದ್ದರೂ ಹುಬ್ಬಳ್ಳಿಯಲ್ಲಿ ಶೂಟಿಂಗ್ ಇದ್ದರೆ ಉಪಾಹಾರಕ್ಕೆ ಅವರ ಮನೆಗೇ ಹೋಗುತ್ತಿದ್ದೆವು. ಶೆಟ್ಟರ್‌ ಪರ ಪ್ರಚಾರಕ್ಕೆ ಹೋಗುತ್ತೇನೆ’ ಎಂದರು.

‘ನಟ ಸುದೀಪ್ ಪ್ರಚಾರದಲ್ಲಿ ಭಾಗವಹಿಸಿದ್ದನ್ನೂ ನಾನು ಪ್ರಚಾರಕ್ಕೆ ಬಂದಿರುವುದನ್ನು ಹೋಲಿಕೆ ಮಾಡುವುದು ಸರಿಯಲ್ಲ. ಅವರಿಗೆ ಸರಿ ಅನಿಸಿದ್ದನ್ನು ಅವರು ಮಾಡುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದಕ್ಕೂ ಮುನ್ನ ಶಿವರಾಜ್‌ಕುಮಾರ್‌ ಅವರು ಮಧು ಬಂಗಾರಪ್ಪ ಪರ ರೋಡ್‌ ಶೋ ನಡೆಸಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

11 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

14 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

14 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

21 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago