ರಾಜನಂದಿನಿ BJP ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರದು ; ಮಧು ಬಂಗಾರಪ್ಪ

0 94

ಸೊರಬ: ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ‌ ಪುತ್ರಿ ರಾಜನಂದಿನಿ ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು ಎಂದು‌ ಸೊರಬ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ‌ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಬಂಗಾರಧಾಮದ ಕಾಂಗ್ರೆಸ್ ಚುನಾವಣಾ ನಿರ್ವಹಣಾ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು‌ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

ರಾಜನಂದಿನಿ ಅವರ ಬಿಜೆಪಿ ಸೇರ್ಪಡೆಯಿಂದ ಯಾವುದೇ ಪರಿಣಾಮ ಬೀರದು. ಈ ಬಗ್ಗೆ ಅವರ ತಂದೆ ಕಾಗೋಡು ತಿಮ್ಮಪ್ಪ ಅವರೇ ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಟ 125 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ‌ ಹಿಡಿಯಲಿದೆ. ಇನ್ನು ಕ್ಷೇತ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯ ಪರ್ವವೇ ಆರಂಭವಾಗಿದ್ದು, ಇದು ರಾಜ್ಯದಲ್ಲಿಯೇ ಮಾದರಿಯಾಗಿದೆ ಎಂದರು.

Leave A Reply

Your email address will not be published.

error: Content is protected !!