Categories: Soraba

ಸರ್ಕಾರಿ ನೌಕರರ ಸಂಘದ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ | ಬಿಕೋ ಎಂದ ಸರ್ಕಾರಿ ಕಚೇರಿಗಳು ; ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯ


ಸೊರಬ: ವೇತನ ಪರಿಷ್ಕರಣೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ರದ್ದುಪಡಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿರುವುದರಿಂದ ಪಟ್ಟಣ ಸೇರಿ ತಾಲೂಕಿನಾದ್ಯಂತ ಸರ್ಕಾರಿ ಸೇವೆಗಳಲ್ಲಿ ಬುಧವಾರ ವ್ಯತ್ಯಯ ಉಂಟಾಯಿತು.


ಪಟ್ಟಣದಲ್ಲಿ ಸದಾ ಸಾರ್ವಜನಿಕರಿಂದ ಗಿಜಿಗುಡುತ್ತಿದ್ದ ತಾಲೂಕು ಕಚೇರಿ, ಪುರಸಭೆ, ತಾಲೂಕು ಪಂಚಾಯ್ತಿ ಕಚೇರಿಗಳು ಬಾಗಿಲು ಹಾಕಿದ್ದರಿಂದ ಬಿಕೋ ಎನ್ನುವ ವಾತಾವರಣ ಸೃಷ್ಠಿಯಾಗಿತ್ತು. ಉಳಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳಿಗೆ ನೌಕರರು ಹಾಜರಾಗದ ಕಾರಣ ಕಚೇರಿಗಳಿಗೆ ಬೀಗ ಜಡಿಯಲಾಗಿತ್ತು. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು-ಬೋಧಕರು ಸೇವೆ ಸಲ್ಲಿಸದ ಕಾರಣ ತರಗತಿಗಳು ನಡೆಯಲಿಲ್ಲ. ಕಾರಣ ವಿದ್ಯಾರ್ಥಿಗಳು ಮನೆಗಳಿಗೆ ವಾಪಾಸ್ಸಾಗುತ್ತಿದ್ದ ದೃಶ್ಯ ಕಂಡು ಬಂದಿತು.
ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯು ಮುಷ್ಕರಕ್ಕೆ ಕೈ ಜೋಡಿಸಿದ್ದು, ತುರ್ತು ಆರೋಗ್ಯ ಸೇವೆಗಳನ್ನು ಹೊರತು ಪಡಿಸಿ, ಉಳಿದಂತೆ ಎಲ್ಲಾ ಸೇವೆಗಳು ಬಂದ್ ಆಗಿದ್ದವು. ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಹೊರ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖಮಾಡಿದರು. ಇನ್ನು ಖಾಸಗಿ ಶಾಲಾ-ಕಾಲೇಜ್‍ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಇನ್ನು ವಿವಿಧ ಕಚೇರಿಗಳಲ್ಲಿ ಖಾಯಂ ಸರ್ಕಾರಿ ನೌಕರರು ಮುಷ್ಕರದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ದಿನಗೂಲಿ ನೌಕರರು ಹಾಗೂ ಗುತ್ತಿಗೆ ನೌಕರರು ಸಹ ಕರ್ತವ್ಯಕ್ಕೆ ಹಾಜರಾಗಲಿಲ್ಲ.


ನೌಕರರ ಸಭೆ :

ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್ ನೇತೃತ್ವದಲ್ಲಿ ನೌಕರರ ಸಂಘದ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶನದಂತೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸಲಾಗುತ್ತಿದ್ದು, ಇದಕ್ಕೆ ಎಲ್ಲಾ ಇಲಾಖೆಯ ನೌಕರರು ಪೂರ್ಣ ಬೆಂಬಲ ನೀಡಿದ್ದಾರೆ. ಸರ್ಕಾರಿ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಇದು ನೌಕರರಿಗೆ ತೃಪ್ತಿ ತಂದಿಲ್ಲ. ಇನ್ನೂ ಎನ್‍ಪಿಎಸ್ ನೌಕರರಿಗೆ ನ್ಯಾಯ ದೊರೆತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸಂಘದ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


ಸಭೆಯಲ್ಲಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಸಿ.ಪಿ. ಸದಾನಂದ, ಖಜಾಂಚಿ ಸಂತೋಷ್ ಕುಮಾರ್, ಹಿರಿಯ ಉಪಾಧ್ಯಕ್ಷ ನಟೇಶ್, ಉಪಾಧ್ಯಕ್ಷ ಮಂಜಪ್ಪ, ಸೋಮಶೇಖರ್, ಚಂದ್ರಾನಾಯ್ಕ್, ಪಿಡಿಒ ಸಂಘದ ತಾಲೂಕು ಅಧ್ಯಕ್ಷ ಎಸ್. ಚಿದಾನಂದ, ಆರೋಗ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ನಾಗರಾಜ್, ನೌಕರರಾದ ದೀಪಕ್ ದೋಂಗಡೇಕರ್, ರಾಮಪ್ಪ, ಸಂಜಯ್, ಕೃಷ್ಣಮೂರ್ತಿ, ಬಾಲಚಂದ್ರ, ವಿನಯ ಕುಮಾರ್, ಸಂದೀಪ್, ಸಿದ್ದನಗೌಡ, ಎನ್. ಗಣಪತಿ, ರವಿ ಕುಮಾರ್, ದಿವಾಕರ್ ನಾಯ್ಕ್ ಸೇರಿದಂತೆ ಇತರರಿದ್ದರು.

Malnad Times

Recent Posts

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

23 mins ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 hour ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

2 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

5 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

7 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

10 hours ago