ಹರೀಶಿ ಗ್ರಾ.ಪಂ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

0 38

ಸೊರಬ : ತಾಲೂಕಿನ ಹರೀಶಿ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನುಸೂಯ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಎಲ್. ರವಿಕುಮಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 6 ಸದಸ್ಯರು ಗೈರಾಗಿದ್ದು‌. ಇನ್ನು 9 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಅನುಸೂಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಎಲ್. ರವಿಕುಮಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ದಂಡಾವತಿ ಜಲಾನಯನ ಯೋಜನೆ ಉಪವಿಭಾಗದ ಸಹಾಯಕ ಅಭಿಯಂತರ ಸಂಪತ್ ಕುಮಾರ್ ಅವರು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎಲ್. ಸಂತೋಷ್ ಸಹಕರಿಸಿದರು.

ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷೆ ಅನುಸೂಯ ಮಾತನಾಡಿ, ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಕರ್ತರಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರಿಗೆ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಚ್ ಗಣಪತಿ ಹುಲ್ತಿಕೊಪ್ಪ ಮಾತನಾಡಿ, ಕ್ಷೇತ್ರದ ಜನತೆಯ ಆಶೀರ್ವಾದದಿಂದ ಎಸ್. ಮಧು ಬಂಗಾರಪ್ಪ‌ ಅವರು ಕ್ಷೇತ್ರದ ಶಾಸಕರಾಗುವ ಜೊತೆಗೆ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಗ್ರಾಮ ಪಂಚಾಯ್ತಿಗೆ ಅವಶ್ಯವಿರುವ ಅನುದಾನವನ್ನು ಕೇಳುವ ಮೂಲಕ ಪಂಚಾಯ್ತಿ ವ್ಯಾಪ್ತಿ ಸೇರಿದಂತೆ ತಾಲೂಕಿನಲ್ಲಿ ಅಭಿವೃದ್ಧಿ‌ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ತಾಪಂ ಮಾಜಿ ಸದಸ್ಯ ಸುನಿಲ್ ಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಉಮಾಪತಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ಜೋತಾಡಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿದರು,

ಗ್ರಾಪಂ ಸದಸ್ಯರಾದ ವಜ್ರಕುಮಾರ, ಕೆ.ಟಿ. ರಾಕೇಶ್, ಪಿ. ಕೃಷ್ಣ, ಜಯಲಕ್ಷ್ಮಿ, ಶೈಲಜಾ, ಸರೋಜ, ಮಂಜುಳಾ, ಎಪಿ.ಎಂ.ಸಿ ಸದಸ್ಯ ಜಯಶೀಲಗೌಡ್ರು, ಹರೀಶಿ ವಿಎಸ್ಎಸ್ ಅಧ್ಯಕ್ಷ ಶಿವಾನಂದ್, ಚಂದ್ರಗುತ್ತಿ ಗ್ರಾಪಂ ಸದಸ್ಯ ರೇಣುಕಾಪ್ರಸಾದ್, ಕಾಂಗ್ರೆಸ್ ಮುಖಂಡರಾದ ಸುಧಾಕರ್ ನಾಯ್ಕ, ಮಂಜು ಮುಗೇರ್, ಪ್ರದೀಪ್ ಬಾಡದಬೈಲು, ವಿನಾಯಕ್ ಹೆಗಡೆ, ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!