Spurious Liquor | ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ ; ಆರೋಪಿ ವಶಕ್ಕೆ

0 10

ಸೊರಬ: ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ ಕಲ್ಲಪ್ಪ ಈರಪ್ಪ ಎಂಬಾತ ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ ತಯಾರಿಸುವ ವೇಳೆ ದಾಳಿ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ ಉಪಾಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್, ಸಾಗರ ವಿಭಾಗದ ಉಪ ಅಧೀಕ್ಷಕ ಶಿವಪ್ರಸಾದ್ ಮಾರ್ಗದರ್ಶನದಲ್ಲಿ ಹಾಗೂ ಸೊರಬ ಅಬಕಾರಿ ನಿರೀಕ್ಷಕ ಶ್ರೀನಾಥ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ರಾಮಪ್ಪ, ಬಾಲಚಂದ್ರ, ಮಹಾಂತೇಶ್, ದೇವರಾಜ್, ಗಣಪತಿ, ಕಾಂತರಾಜ್, ರೋಶಾಂತ್ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!