ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಡೆಗೋಡೆಗೆ ಕ್ಯಾಂಟರ್‌ವೊಂದು ಡಿಕ್ಕಿ ಹೊಡೆದಿದ್ದೇ ಇದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಒಂದು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ವಾಹನಗಳು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಘಾಟಿಯ 9ನೇ ತಿರುವಿನಲ್ಲಿ ಚಾಲಕನ ನಿಯಂತ್ರಣದ ತಪ್ಪಿದ ಟ್ಯಾಂಕರ್ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.