ತೀರ್ಥಹಳ್ಳಿ : ಚುನಾವಣೆ ಕಣ ದಿನೇ ದಿನೇ ರಂಗೇರುತ್ತಿದ್ದು, ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಎರಡು ಪಟ್ಟಿ , ಜೆಡಿಎಸ್ ಒಂದು ಪಟ್ಟಿ ರಿಲೀಸ್ ಮಾಡಿದ್ದೂ, ಏ. 9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಇಂದು ತಾಲೂಕಿನ ತೂದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆಗಿದೆ.ಎಲ್ಲಾ ಗೊಂದಲ ನಿವಾರಣೆಯಾಗಲಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಡ ಆಗಲ್ಲ, ಏ.9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಈ ಸಂಬಂಧ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ವರಿಷ್ಠರು ಅಂತಿಮ ಮಾಡಲಿದ್ದು, ಏಪ್ರಿಲ್ 9 ರಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.