ತೂದೂರು ಗ್ರಾಪಂ ಪಿಡಿಓ ಪ್ರಕಾಶ್ ಇನ್ನಿಲ್ಲ !

0 899

ತೀರ್ಥಹಳ್ಳಿ : ತಾಲೂಕಿನ ತೂದೂರು (Thudur) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ (PDO) ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ (58) ನಿಧನರಾಗಿದ್ದಾರೆ.


ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಮೂಲತಃ ಬೆಜ್ಜವಳ್ಳಿಯವರಾದ ಪ್ರಕಾಶ್ ಕಳೆದ 5 ವರ್ಷಗಳಿಂದ ತೂದೂರು ಗ್ರಾಮ ಪಂಚಾಯಿತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಹುಂಚದಕಟ್ಟೆಯಲ್ಲಿ ಕಾರ್ಯನಿರ್ವಹಿಸಿದ್ದರು.

Leave A Reply

Your email address will not be published.

error: Content is protected !!