ತೀರ್ಥಹಳ್ಳಿ: ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರ ಮಾಡಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರದ್ದು ಪಡಿಸಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್ ರಿವರ್ಸ್ ಎಂಜಿನ್ ಪಕ್ಷ ಎಂಬುದನ್ನು ಸ್ವತಃ ಆ ಪಕ್ಷದವರೇ ಘೋಷಿಸಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ ಟೀಕಿಸಿದರು.
ಮಂಗಳವಾರದ ಬಾಳೇಬೈಲಿನಲ್ಲಿ ನಡೆದ ಬಿಜೆಪಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿ, ಆರಗ ಜ್ಞಾನೇಂದ್ರ ಸೈದ್ಧಾಂತಿಕ ಬದ್ಧತೆ ಹೊಂದಿದ್ದು ವೈಯಕ್ತಿಕ ಛಾಪು ಹೊಂದಿದ್ದಾರೆ. ಕನಿಷ್ಠ 40 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನಮಗಿದೆ. ಬಿಜೆಪಿ ಸಾಮಾಜಿಕ ನ್ಯಾಯ ನೀಡುವ ಜೊತೆಗೆ ದೇಶದ ಅಭಿವೃದ್ಧಿಗೆ ವೇಗ ನೀಡಿದೆ ಎಂದು ಅವರು ಹೇಳಿದರು.