ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ತುಂಗಾ ನದಿ ಪಾಲು..!!
ತೀರ್ಥಹಳ್ಳಿ: ತಾಲೂಕಿನ ತೀರ್ಥಮುತ್ತೂರು ಮಠದ ಮುಂಭಾಗ ಇರುವ ಹೋಂ ಸ್ಟೇಯಲ್ಲಿ ಉಳಿದಿದ್ದ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ಭಾನುವಾರ ನಡೆದಿದೆ.

ಶನಿವಾರ ಪ್ರವಾಸಕ್ಕೆ ಬಂದಿದ್ದ 8-10 ಮಂದಿ ತಂಡ ತುಂಗಾ ನದಿಯಲ್ಲಿ ಈಜಲು ತೆರಳಿದಾಗ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದರು. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ.
ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.