ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಕಾರು ಚಾಲಕನ ಸ್ಥಿತಿ ಗಂಭೀರ

0 1,720

ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜು (Thunga College) ಬಳಿ ಖಾಸಗಿ ಬಸ್ (Bus) ಮತ್ತು ಫಾರ್ಚುನರ್ ಕಾರಿನ (Car) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಘಟನೆ ನಡೆದಿದೆ.

ಶಿವಮೊಗ್ಗದಿಂದ (Shivamogga) ಬರುತ್ತಿದ್ದ ಖಾಸಗಿ ಬಸ್‌ಗೆ ತೀರ್ಥಹಳ್ಳಿಯಿಂದ (Thirthahalli) ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ.

ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡುಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Leave A Reply

Your email address will not be published.

error: Content is protected !!