ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ; ಸವಾರನಿಗೆ ಗಂಭೀರ ಗಾಯ!
ತೀರ್ಥಹಳ್ಳಿ : ತೀರ್ಥಹಳ್ಳಿ – ಸಾಗರ ರಸ್ತೆ ಸುರಾನಿ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಗಾಯಾಳುವನ್ನು ಕಮ್ಮರಡಿ ಬಳಿಯ ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತನ ತಲೆ ಮತ್ತು ಭುಜಕ್ಕೆ ತೀವ್ರ ಸ್ವರೂಪದ ಗಾಯವಾಗಿದ್ದು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು ಬೈಕ್ ಸಹ ಸಂಪೂರ್ಣ ಹಾನಿಯಾಗಿದೆ.

ಈತ ತನ್ನ ಪತ್ನಿಯ ತವರೂರು ಕೋಡೂರು ಸಮೀಪದ ಹಿಂಡ್ಲೆಮನೆಯಿಂದ ಸ್ವಗ್ರಾಮ ಕಮ್ಮರಡಿ ಕಡೆ ಇಂದು ಬೆಳಗ್ಗೆ ಬೈಕಿನಲ್ಲಿ ಪ್ರಯಾಣ ಬೆಳೆಸಿದ್ದು ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.