ಬೆಳಗ್ಗೆ ಬಿಜೆಪಿಗೆ ಸೇರಿ ಸಂಜೆ ಆಗುತ್ತಲೆ ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ ನಾಯಕ !

0 69

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರಗೆ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹೋಗಿದ್ದ ಕಾಂಗ್ರೆಸ್ ಮುಖಂಡರನ್ನ ಮತ್ತೆ ಕಾಂಗ್ರೆಸ್‌ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ಇವತ್ತು ಬೆಳಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆರಗ ಜ್ಞಾನೇಂದ್ರ ಅವರು ತಮ್ಮ ನಿವಾಸದಲ್ಲೇ ಮಂಜುನಾಥ್ ಭಂಡಾರಿ ಅವರನ್ನ ಪಕ್ಷಕ್ಕೆ ಬರಮಾಡಿಕೊಂಡಿದ್ದರು.

ಆರಗ ಜ್ಞಾನೇಂದ್ರ ಭರವಸೆಗೆ ಒಪ್ಪಿದ್ದ ಮಂಜುನಾಥ್ ಭಂಡಾರಿ ಅವರು ಸಂಜೆ ಆಗ್ತಿದ್ದಂತೆ ಕಾಂಗ್ರೆಸ್‌ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ಸಂಜೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ.

Leave A Reply

Your email address will not be published.

error: Content is protected !!