ಮಳೆಯಲ್ಲೇ ಶವ ಸಂಸ್ಕಾರ ನಡೆಸಿದ ಕುಟುಂಬಸ್ಥರು ! ಎಲ್ಲಿದು ?

0 0

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮ ಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ ಮೃತಪಟ್ಟ ವ್ಯಕ್ತಿಯೋರ್ವರ ಶವವನ್ನು ಕುಟುಂಬವರ್ಗ ಹಾಗೂ ಸ್ಥಳೀಯರು ಮಳೆ ನೀರಿನಲ್ಲಿ ಸಂಸ್ಕಾರ ನಡೆಸಿದ ಅಮಾನವೀಯ ಘಟನೆ ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಶುಕ್ರವಾರ ನಡೆದಿದೆ.

ಸ್ಮಶಾನದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಸಮಸ್ಯೆ ಆಗಿದೆ..
ಮಲೆನಾಡ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜೋರಾಗಿ ಸುರಿಯುವ ಮಳೆಯಲ್ಲಿಯೇ ಮೃತರ ಅಂತ್ಯಸಂಸ್ಕಾರ ನಡೆಸಲಾಗಿದೆ. ಸ್ಮಶಾನಕ್ಕೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಜನರಿಗೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಿ ಸ್ಮಶಾನಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಡುತ್ತಾರ ಕಾದು ನೋಡಬೇಕಿದೆ.

Leave A Reply

Your email address will not be published.

error: Content is protected !!