ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ ; ಇಬ್ಬರ ಬಂಧನ, ಮೂವರು ಮಹಿಳೆಯರ ರಕ್ಷಣೆ

0 2

ತೀರ್ಥಹಳ್ಳಿ : ತೀರ್ಥಹಳ್ಳಿ ಟೌನ್ ವಾಸದ ಮನೆಯೊಂದರಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್‌.ಕೆ.ಎಸ್‌ (33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ.ಎಂ (37) ಎಂಬುವವರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ‌.
ತೀರ್ಥಹಳ್ಳಿ ಇನ್ಸ್‌ಪೆಕ್ಟರ್‌ ಅಶ್ವಥಗೌಡ, ಪಿಎಸ್‌ಐ ಸಾಗರ್‌ ಅತ್ತರವಾಲ, ಪಿಎಸ್‌ಐ ಗಾದಿಲಿಂಗಪ್ಪ ಗೌಡರ್‌, ಪೊಲೀಸ್‌ ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರದ ಕಿರಣ್‌ ಕುಮಾರಿ ದಾಳಿಯಲ್ಲಿ ಭಾಗವಹಿಸಿದ್ದರು.

Leave A Reply

Your email address will not be published.

error: Content is protected !!