Thirthahalli | ಸಹಕಾರಿ ದಿಗ್ಗಜ, ಮಾಜಿ ಎಂಎಲ್‌ಸಿ ಬಿ.ಎಸ್. ವಿಶ್ವನಾಥನ್ ಇನ್ನಿಲ್ಲ !

0 1,444

ತೀರ್ಥಹಳ್ಳಿ : ಹಿರಿಯ ಸಹಕಾರಿ, ವಿಧಾನ ಪರಿಷತ್ ಮಾಜಿ ಸದಸ್ಯ, ರಾಜ್ಯ ಭೂ ಬ್ಯಾಂಕ್ ಮಾಜಿ ಅಧ್ಯಕ್ಷ, ರಾಷ್ಟ್ರೀಯ ಸಹಕಾರಿ ತರಬೇತಿ ಕೇಂದ್ರದ ಅಧ್ಯಕ್ಷ, ತೀರ್ಥಹಳ್ಳಿ ಪುರಂದರ ವೇದಿಕೆ ಸ್ಥಾಪಕ, ಇಫ್ಕೋ ಸಂಸ್ಥೆಯ ನಿರ್ದೇಶಕ, ಕೆನರಾ ಬ್ಯಾಂಕ್‌ನ ಮಾಜಿ ನಿರ್ದೇಶಕ ಬಿ.ಎಸ್ ವಿಶ್ವನಾಥನ್ (90) ಇಂದು ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ವಿಶ್ವನಾಥ್ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದರು. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವನಾಥ್ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲ ಗೌಡರ ವಿರುದ್ದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಜಿತರಾಗಿದ್ದರು. ಅದರೆ ಬಳಿಕ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ತೀರ್ಥಹಳ್ಳಿಯ ಪುರಂದರ ವೇದಿಕೆ ಸ್ಥಾಪಿಸಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.

ಮೃತರು ಪತ್ನಿ ಶಾರದಾ, ಪುತ್ರ ಅವಿನಾಶ್ ಹಾಗೂ ಪುತ್ರಿ ಅರ್ಚನಾ ಅವರನ್ನು ಅಗಲಿದ್ದಾರೆ. ವಿಶ್ವನಾಥ್ ನಿಧನಕ್ಕೆ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!