ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣು ಮಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಲ್ಲೆ ನಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.
ರವಿ ನಾಯಕ್ ಎಂಬುವವರು ಅಲ್ಲಿ ಡಿಮಾಂಡ್ ಮೂಲಕ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮ ಪಂಚಾಯಿತಿಯಿಂದ ಡಿಮಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅಧಿಕಾರಿಗಳು ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ.
ಸುಮಾರು 8 ಜನ ಅರಣ್ಯ ಅಧಿಕಾರಿಗಳು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಮನೆಯಲ್ಲಿ ಇದ್ದ ಸಾಮಾನುಗಳನ್ನು ಬೀದಿಗೆ ಎಸೆದು ಮನೆ ಕಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ. ಹೆಣ್ಣು ಮಗಳ ಮೇಲೆ ಕೈ ಮಾಡಿರುವ ಅರಣ್ಯಾಧಿಕಾರಿಯನ್ನು ಕೂಡಲೇ ಕೆಲಸದಿಂದ ತೆಗೆಯಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.