Categories: Thirthahalli

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ ಇಲ್ಲ, ಕಿಚಡಿ ಸರ್ಕಾರ ಬೇಡ ಎಂದು ರಾಜ್ಯದ ಜನತೆ ತೀರ್ಮಾನಿಸಿದ್ದಾರೆ ; ಅಣ್ಣಾಮಲೈ

ತೀರ್ಥಹಳ್ಳಿ : ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ ಇಲ್ಲ. ಪಕ್ಷದ ಕಾರ್ಯಕರ್ತರಾಗಿ ದುಡಿದವರಿಗೆ ಪಕ್ಷ ಟಿಕೆಟ್ ನೀಡಿದೆ. ಅದರಲ್ಲಿ ಕೆಲವರು ಕೆಲವರು ಮಗ ಸೊಸೆ ಆಗಿರಬಹುದು. ಆದರೆ ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದರು.

ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಿಜೆಕ್ಷನ್ ಮತ್ತು ಸೆಲೆಕ್ಷನ್ ಇಲ್ಲವೇ ಇಲ್ಲ. ಸುಳ್ಯದಲ್ಲಿ ಬಡ ಕುಟುಂಬದ ಭಾಗೀರಥಿಯವರಿಗೆ ಟಿಕೆಟ್ ನೀಡಲಾಗಿದೆ. ಯಾವುದೇ ಪಕ್ಷದಲ್ಲಿ ಇಂತಹ ಬಡ ಅಭ್ಯರ್ಥಿಗಳನ್ನು ಗುರುತಿಸುವುದಿಲ್ಲ. ಬಿಜೆಪಿ ಪಕ್ಷ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತದೆ. ಪಕ್ಷದಲ್ಲಿ ಸಂಘಟನೆ ಮಾಡಿದ ಹಿರಿಯ ನಾಯಕರನ್ನು ಗುರುತಿಸುತ್ತದೆ ಎಂದು ಹೇಳಿದರು.

ರಾಜಕೀಯ ಕಲಿಯುತ್ತಿದ್ದೇನೆ

ಇನ್ನು, ನಾವೆಲ್ಲ ಸಾಮಾನ್ಯ ಕಾರ್ಯಕರ್ತರಂತೆ ಪಕ್ಷದ ಕೆಲಸ ಮಾಡುತ್ತಿದ್ದೇವೆ ಎಂದ ಅಣ್ಣಾಮಲೈ, ಬೆಳಗ್ಗೆ ಸುಳ್ಯದಲ್ಲಿ ಸದಾನಂದ ಗೌಡರ ಜೊತೆ ಸಮಾವೇಶದಲ್ಲಿ ಪಾಲ್ಗೊಂಡಿದ್ದೆ. ಜಗದೀಶ್ ಶೆಟ್ಟರ್ ಅವರು ಪಕ್ಷದ ಹಿರಿಯರು, ಅವರು ಪಕ್ಷ ಕಟ್ಟಿದ್ದಾರೆ. ಯಾವುದೋ ಒತ್ತಡದಲ್ಲಿ ಏನೋ ಹೇಳಿರಬಹುದು. ನಾವಿಂದು ಬಂದಿರುವುದು ಸಾಮಾನ್ಯ ಕಾರ್ಯಕರ್ತರ ಕೆಲಸ ಮಾಡಲು. ನಾನು ಶೆಟ್ಟರ್, ಬಿಎಸ್‌ವೈ, ಸದಾನಂದ ಗೌಡ, ಸಿಎಂ ಬೊಮ್ಮಾಯಿ ಮೊದಲಾದ ಹಿರಿಯ ರಾಜಕಾರಣಿಗಳಿಂದ ರಾಜಕೀಯ ಪಾಠ ಕಲಿಯುತ್ತಿದ್ದೇನೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್‌ ಬಗ್ಗೆ ಬಹಳ ಗೌರವ ಹೊಂದಿದ್ದೇನೆ ಎಂದ ಅಣ್ಣಾಮಲೈ, ನಾನು ಪೊಲೀಸ್ ಇಲಾಖೆಯಲ್ಲಿ ಇದ್ದಾಗಲೂ ಕೂಡ ಶೆಟ್ಟರ್ ನನಗೆ ಪರಿಚಿತರು. ಅವರು ಯಾವುದೋ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ, ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಶೆಟ್ಟರ್, ಸವದಿ ಮೊದಲಾದವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಬಿಜೆಪಿಗೆ ಯಾವುದೇ ಹಿನ್ನಡೆಯಾಗಿಲ್ಲ. ಎಲ್ಲರಿಗೂ ಕೂಡ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪಕ್ಷ ನೀಡಿತ್ತು, ಆದರೂ ಪಕ್ಷ ಬಿಟ್ಟು ಹೋದರು ಎಂದು ಹೇಳಿದರು.

ಪಕ್ಷ ಯಾರನ್ನೂ ತಿರಸ್ಕಾರ ಮಾಡಿಲ್ಲ

ಇನ್ನು, ಪ್ರಜಾಪ್ರಭುತ್ವದಲ್ಲಿ ಕೇವಲ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಮಾತ್ರ ಅಲ್ಲ ಎಂದ ಅಣ್ಣಾ ಮಲೈ, ರಾಜ್ಯಸಭೆ, ಎಂಎಲ್ಸಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಹಲವು ಸ್ಥಾನಮಾನಗಳು ಇದೆ. ಪಕ್ಷ ಯಾರನ್ನೂ ತಿರಸ್ಕಾರ ಮಾಡಿಲ್ಲ. ಪ್ರತಿಯೊಬ್ಬರಿಗೂ ಒಂದಲ್ಲ ಒಂದು ದಾರಿಯನ್ನು ನೀಡಿತ್ತು. ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಹತ್ತನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕೂಡ ಪಕ್ಷ ಮಾಡಿದ ನಿರ್ಧಾರ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದೇ ವೇಳೆ, ಬಿಜೆಪಿ ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದ ಅಣ್ಣಾಮಲೈ, ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಪಡೆಯಲಿದೆ. ಕಿಚಡಿ ಸರ್ಕಾರ ಬೇಡ ಎಂದು ರಾಜ್ಯದ ಜನತೆ ತೀರ್ಮಾನಿಸಿದ್ದಾರೆ. ಶಿವಮೊಗ್ಗ ಕ್ಷೇತ್ರ ಈಶ್ವರಪ್ಪನವರಂತ ನಾಯಕರು ಇರುವ ಕ್ಷೇತ್ರ. ಅಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಬಿಜೆಪಿ ನೀಡಲಿದೆ. ಬಿಜೆಪಿ ಪಕ್ಷದಲ್ಲಿ ಎಲ್ಲರೂ ಕೂಡ ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಬೇಕಾಗಿದೆ. ನಾನು ಕೂಡ ಸಾಮಾನ್ಯ ಸಣ್ಣ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

6 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

11 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

20 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago